Breaking News

ಭೀಕರ ಅಪಘಾತ. ದ್ವಿಚಕ್ರ ವಾಹನ ಸವಾರರು ಸ್ಥಳದಲ್ಲೇ ಮೃತ್ಯು, ದೇಹಗಳು ಛಿದ್ರ

Spread the love

ಹುಬ್ಬಳ್ಳಿ: ದ್ವಿಚಕ್ರ ವಾಹನಕ್ಕೆ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಎರಡು ದೇಹಗಳು ಛಿದ್ರಗೊಂಡ ಘಟನೆ ನಗರದ ಹೊರವಲಯದ ಗೋಕುಲ ಗ್ರಾಮದ ಧಾರಾವತಿ ಹನುಮಂತ ದೇವಸ್ಥಾನ ಬಳಿಯ ಬೈಪಾಸ್‌ ರಸ್ತೆಯಲ್ಲಿ ಮಂಗಳವಾರ (ಅ.15) ಬೆಳಗ್ಗೆ ನಡೆದಿದೆ.

ಅವಘಡದಲ್ಲಿ ಬೆಂಗಳೂರಿನ ಗೋಪಾಲಕೃಷ್ಣ ಉಪಾಧ್ಯಾಯ (52) ಹಾಗೂ ಧಾರವಾಡದ ಸದಾನಂದ ದೇವಾಡಿಗ (48) ಮೃತಪಟ್ಟಿದ್ದಾರೆ.

 

ವಾಹನವೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದುಕೊಂಡು ಹೋಗಿದೆ. ನಂತರ ಇನ್ನೊಂದು ವಾಹನ ಇವರ ಮೇಲೆ ಹಾಯ್ದ ಪರಿಣಾಮ ಸವಾರರಿಬ್ಬರ ದೇಹಗಳು ಛಿದ್ರವಾಗಿವೆ. ಸ್ಥಳಕ್ಕೆ ಉತ್ತರ ಸಂಚಾರ ಠಾಣೆ ಪೊಲೀಸರು ಭೇಟಿಕೊಟ್ಟು ದೇಹಗಳನ್ನು ಕೆಎಂಸಿಆರ್‌ಐ ಶವಾಗಾರಕ್ಕೆ ಸ್ಥಳಾಂತರಿಸಿದ್ದಾರೆ.


Spread the love

About Laxminews 24x7

Check Also

ಕಾಡಾನೆ ದಾಳಿಯಿಂದ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡಿದ ಸಚಿವ ಕೆ.ಜೆ. ಜಾರ್ಜ್

Spread the loveಚಿಕ್ಕಮಗಳೂರು: ಜಿಲ್ಲೆಯ ಶೃಂಗೇರಿ ತಾಲೂಕಿನ ಕೆರೆಮನೆ ಗ್ರಾಮದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟ ದಾರುಣ ಘಟನೆ ಜಿಲ್ಲೆಯಾದ್ಯಂತ ಶೋಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ