ಹುಕ್ಕೇರಿ: ಉದ್ಯೋಗ ಖಾತರಿ ಯೋಜನೆಯಡಿ 2025-26ನೇ ಸಾಲಿನ ಕ್ರಿಯಾ ಯೋಜನೆ ತಯಾರಿಸಲು ‘ಉದ್ಯೋಗ ಖಾತರಿ ನಡಿಗೆ ಸಬಲತೆಯೆಡೆಗೆ’ ಅಭಿಯಾನಕ್ಕೆ ತಾಲ್ಲೂಕು ಪಂಚಾಯ್ತಿ ಇಒ ಟಿ.ಆರ್. ಮಲ್ಲಾಡದ ಚಾಲನೆ ನೀಡಿದರು.
ಮಂಗಳವಾರ ತಾಲ್ಲೂಕು ಪಂಚಾಯ್ತಿ ಆವರಣದಲ್ಲಿ ನರೇಗಾ ಯೋಜನೆಯಡಿಯ ‘ಉದ್ಯೋಗ ಖಾತರಿ ನಡಿಗೆ ಸಬಲತೆಯೆಡೆಗೆ’ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕೃಷಿ, ತೋಟಗಾರಿಕೆ ಮತ್ತು ರೇಷ್ಮೆ ಬೆಳೆಗಳನ್ನು ಬೆಳಯಲು ಈ ಯೋಜನಯಡಿಯಲ್ಲಿ ಅವಕಾಶವಿದೆ.
ಗ್ರಾಮ ಪಂಚಾಯ್ತಿಗಳಿಂದ ವೈಯಕ್ತಿಕ ಕಾಮಗಾರಿ ಕೈಕೊಳ್ಳಲು ಗ್ರಾಮೀಣ ಭಾಗದ ರೈತರಿಗೆ ಅವಕಾಶವಿದ್ದು, ಇದರ ಸದುಪಯೋಗ ಪಡೆದುಕೊಳ್ಳಬೇಕು’ ಎಂದು ಸಲಹೆ ನೀಡಿದರು.
2025-26 ನೇ ಸಾಲಿನ ಕ್ರಿಯಾ ಯೋಜನೆ ತಯಾರಿಕೆಗೆ ರೈತರು ತಮಗೆ ಅವಶ್ಯಕ ಕಾಮಗಾರಿಗಳ ಬೇಡಿಕೆ ಸಲ್ಲಿಸಬೇಕು ಮತ್ತು ಗ್ರಾಮ ಸಭೆಗಳಲ್ಲಿ ಭಾಗವಹಿಸಲು ಸೂಚನೆ ನೀಡಿದರು.