ಬೆಂಗಳೂರು : ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜೈಲುಪಾಲಾಗಿದ್ದ ಶಾಸಕ ಮುನಿರತ್ನ ನಾಯ್ಡು ಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದ್ದು, ಇದೀಗ ಇಂದು ಬಿಡುಗಡೆಯಾಗಿದ್ದಾರೆ.
ಮಂಗಳವಾರ ಜಾಮೀನು ಅರ್ಜಿ ತೀರ್ಪು ನೀಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಮುನಿರತ್ನ ಅವರಿಗೆ ಷರತ್ತು ಬದ್ಧ ಜಾಮೀನು ನೀಡಿತ್ತು.
ಅದರಂತೆ ಇಂದು ಬೆಳಗ್ಗೆ ಪರಪ್ಪನ ಅಗ್ರಹಾರದಿಂದ ಅವರು ಬಿಡುಗಡೆಯಾದರು.
ಗುತ್ತಿಗೆದಾರನಿಗೆ ಜೀವ ಬೆದರಿಕೆ ಮತ್ತು ಜಾತಿ ನಿಂದನೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಅವರು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಇದರ ಬೆನ್ನಲ್ಲೇ ಅತ್ಯಾಚಾರ ಪ್ರಕರಣ ಅವರಿಗೆ ಸುತ್ತಿಕೊಂಡಿತ್ತು. ಇದೀಗ ಈ ಪ್ರಕರಣದಲ್ಲಿ ಅವರಿಗೆ ಬೇಲ್ ಮಂಜೂರಾಗಿದೆ.
Laxmi News 24×7