ಬೆಂಗಳೂರು: ಉಪಚುನಾವಣೆ ಸೇರಿದಂತೆ ಎಲ್ಲಾ ಚುನಾವಣೆಗಳಿಗೂ ಕಾಂಗ್ರೆಸ್ ಸಿದ್ಧವಿದ್ದು, ಮೂರೂ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವ ಸಾಧಿಸುವ ವಿಶ್ವಾಸವಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಮಂಗಳವಾರ ಹೇಳಿದರು.
ಚನ್ನಪಟ್ಟಣ, ಸಂಡೂರು ಮತ್ತು ಶಿಗ್ಗಾಂವಿ ಕ್ಷೇತ್ರಗಳಿಗೆ ಚುನಾವಣಾ ಆಯೋಗ ಉಪಚುನಾವಣೆ ಘೋಷಣೆಯಾದ ಹಿನ್ನೆಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆಗೆ ಈಗಾಗಲೇ ಸಿದ್ಥತೆ ಆರಂಭಿಸಿದ್ದು, ಗೆಲ್ಲುವ ವಿಶ್ವಾಸವಿದೆ ಎಂದು ಹೇಳಿದರು.
ಇದೇ ವೇಳೆ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಯಾರು ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಈ ಚುನಾವಣೆಯಲ್ಲಿ ನಾವೇ ಅಭ್ಯರ್ಥಿಗಳು ಎಂದು ತಿಳಿಸಿದರು
Laxmi News 24×7