ಬೆಳಗಾವಿ: ಈ ಬಾರಿಯ ಚಳಿಗಾಲ ಅಧಿವೇಶನವನ್ನು ಡಿ. 9ರಿಂದ 20ರ ವರೆಗೆ ಸುವರ್ಣ ವಿಧಾನಸೌಧದಲ್ಲಿ ನಡೆಸುವುದು ಸೂಕ್ತ ಎಂಬ ನಿರ್ಧಾರಕ್ಕೆ ಬಂದಿದ್ದೇವೆ. ಸಚಿವ ಸಂಪುಟದಲ್ಲಿ ಅಂತಿಮ ದಿನಾಂಕ ಪ್ರಕಟವಾಗಲಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ದಿನಾಂಕ ಘೋಷಿಸಲಿದ್ದಾರೆ ಎಂದು ವಿಧಾನಸಭೆ ಅಧ್ಯಕ್ಷ ಯು.ಟಿ.
ಖಾದರ್ ಹಾಗೂ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.
ಚಳಿಗಾಲ ಅಧಿ ವೇಶನ ಹಿನ್ನೆಲೆಯಲ್ಲಿ ಶುಕ್ರವಾರ ಸುವರ್ಣ ವಿಧಾನಸೌಧ ಪರಿಶೀಲನೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದಾಜು ದಿನಾಂಕದಂತೆ ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕು. ಈಗಿನಿಂದಲೇ ಸಿದ್ಧತೆ ಮಾಡಿಕೊಂಡರೆ ಯಾವುದೇ ಅಡಚಣೆ ಬರಲಾರದು.
ಈ ಬಾರಿಯೂ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ 4 ದಿನಗಳ ಚರ್ಚೆಗೆ ಅವಕಾಶ ನೀಡಲಾಗುವುದು. ಇದಕ್ಕಾಗಿ ಹೆಚ್ಚಿನ ಸಮಯ ಮೀಸಲಿಡಲಾಗುವುದು ಎಂದರು.
Laxmi News 24×7