Breaking News

ದೆಹಲಿಯಿಂದ ಲಂಡನ್ ಗೆ ಹೊರಟಿದ್ದ ವಿಮಾನಕ್ಕೆ ಬಾಂಬ್ ಬೆದರಿಕೆ.

Spread the love

ವದೆಹಲಿ: ದೆಹಲಿಯಿಂದ ಲಂಡನ್ ಗೆ ಹೊರಟಿದ್ದ ವಿಸ್ತಾರ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ಹಿನ್ನೆಲೆಯಲ್ಲಿ ವಿಮಾನವನ್ನು ಫ್ರಾಂಕ್‌ಫರ್ಟ್‌ ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡ್ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇತ್ತೀಚಿನ ದಿನಗಳಲ್ಲಿ ವಿಮಾನಗಳಲ್ಲಿ ಬಾಂಬ್ ಬೆದರಿಕೆ ಬರುತ್ತಿರುವುದು ಇದು ಹದಿನೈದನೇ ಪ್ರಕರಣವಾಗಿದ್ದು ಕೂಡಲೇ ಎಚ್ಚೆತ್ತ ಅಧಿಕಾರಿಗಳು ವಿಮಾನದಲ್ಲಿದ್ದ ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಿ ತಪಾಸಣೆ ನಡೆಸಿದ್ದಾರೆ ಆದರೆ ವಿಮಾನದಲ್ಲಿ ಯಾವುದೇ ಸ್ಫೋಟಕ ವಸ್ತುಗಳು ಪತ್ತೆಯಾಗಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

 

ಶುಕ್ರವಾರ(ಅ.19) ರಾತ್ರಿ ದೆಹಲಿಯಿಂದ ಲಂಡನ್ ಗೆ ಹೊರಟಿದ್ದ ವಿಮಾನಕ್ಕೆ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಶುಕ್ರವಾರ ತಡ ರಾತ್ರಿ ಸುಮಾರು 12.40 ರ ಸುಮಾರಿಗೆ (ಭಾರತೀಯ ಕಾಲಮಾನ) ಫ್ರಾಂಕ್‌ಫರ್ಟ್ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಇಳಿಸಲಾಯಿತು ಇದಾದ ಬಳಿಕ ತಪಾಸಣೆ ನಡೆಸಿ ಯಾವುದೇ ಸ್ಫೋಟಕ ವಸ್ತುಗಳು ಪತ್ತೆಯಾಗಿರದ ಹಿನ್ನೆಲೆಯಲ್ಲಿ ಎರಡು ಗಂಟೆಗಳ ಬಳಿಕ ಮತ್ತೆ ಲಂಡನ್ ಗೆ ಪ್ರಯಾಣ ಬೆಳೆಸಿತು ಎಂದು ವಿಮಾನಯಾನ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ