ಹುಬ್ಬಳ್ಳಿ: ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ಕೊಡಿಸುವುದಾಗಿ ಹೇಳಿ 2ಕೋಟಿ ರೂ. ಇಸಿದುಕೊಂಡು ವಂಚಿಸಿದ ಪ್ರಕರಣದಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸಹೋದರ ಗೋಪಾಲ ಜೋಶಿ ಅವರನ್ನು ಬೆಂಗಳೂರು ಪೊಲೀಸರು ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಬಂಧಿಸಿ ಹುಬ್ಬಳ್ಳಿಗೆ ಕರೆತಂದಿದ್ದು, ಇಲ್ಲಿನ ಕೇಶ್ವಾಪುರ ಪೊಲೀಸ್ ಠಾಣೆಯಲ್ಲಿ ಪಂಚನಾಮೇ ನಂತರದ ಪ್ರಕ್ರಿಯೆ ನಡೆಸುತ್ತಿದ್ದಾರೆ.
ಎಸಿಪಿ ಚಂದನ್ ನೇತೃತ್ವದ ಬೆಂಗಳೂರು ಬಸವೇಶ್ವರ ನಗರ ಠಾಣೆ ಪೊಲೀಸರ ತಂಡ ಕೊಲ್ಹಾಪುರದಲ್ಲಿ ವಶಕ್ಕೆ ಪಡೆದ ನಂತರ ಹುಬ್ಬಳ್ಳಿಯ ಇಂದಿರಾ ಕಾಲೋನಿಯ ಮನೆಯಲ್ಲಿ ತಪಾಸಣೆ ನಡೆಸಿ ಪಂಚನಾಮೆ ನಡೆಸಿದ ನಂತರ ಹೆಚ್ಚಿನ ಪ್ರಕ್ತಿಯೆ ಪೂರೈಸಲು ಕೇಶ್ವಾಪುರ ಠಾಣೆಗೆ ಕರೆತಂದಿದ್ದಾರೆ.
ಮನೆಯಲ್ಲಿ ಯಾವುದೇ ತಪಾಸಣೆ ಮಾಡಿಲ್ಲ. ಹಣ ಸೇರಿ ಏನನ್ನೂ ಪರಿಶೀಲನೆ ಮಾಡಿಲ್ಲ ಎಂದು ತಿಳಿದುಬಂದಿದೆ.ಪ್ರಕರಣದ ದೂರದಾರರಾದ ಸುನಿತಾ ಚವ್ಹಾಣ ಸಹ ಠಾಣೆಗೆ ಆಗಮಿಸಿದ್ದು, ಬೆಂಗಳೂರು ಪೊಲೀಸರಿಗೆ ಮಾಹಿತಿ ನೀಡುತ್ತಿದ್ದಾರೆ.
Laxmi News 24×7