Breaking News

ದಾವಣಗೆರೆ ಜಿಲ್ಲಾ ಆಸ್ಪತ್ರೆಯ ನೂತನ ಕಟ್ಟಡಗಳಿಗಿಲ್ಲ ಉದ್ಘಾಟನೆ ‘ಭಾಗ್ಯ’

Spread the love

ದಾವಣಗೆರೆ: ಇಲ್ಲಿನ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಮಹಿಳೆಯರ ಮತ್ತು ಮಕ್ಕಳ ವಿಭಾಗ ಹಾಗೂ ತುರ್ತು ಚಿಕಿತ್ಸಾ ಕೇಂದ್ರದ ನೂತನ ಕಟ್ಟಡ ನಿರ್ಮಾಣ ಕಾಮಗಾರಿ ಪೂರ್ಣಗೊಂಡು ತಿಂಗಳುಗಳೇ ಕಳೆದರೂ ಉದ್ಘಾಟನೆ ಭಾಗ್ಯ ಕೂಡಿಬಂದಿಲ್ಲ.

ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಡಿ ಅಂದಾಜು ₹ 35 ಕೋಟಿ ವೆಚ್ಚದಲ್ಲಿ ಮಹಿಳೆಯರ ಮತ್ತು ಮಕ್ಕಳ ವಿಭಾಗದ ಕಟ್ಟಡ ನಿರ್ಮಾಣ ಕಾಮಗಾರಿ 2021ರಲ್ಲಿ ಆರಂಭವಾಗಿತ್ತು.

ಕಾಮಗಾರಿ ಪೂರ್ಣಗೊಂಡು ಆರು ತಿಂಗಳು ಕಳೆದಿದೆ. ಸ್ಮಾರ್ಟ್ ಸಿಟಿ ಯೋಜನೆ ಅಡಿ ₹ 13 ಕೋಟಿ ವೆಚ್ಚದಲ್ಲಿ ತುರ್ತು ಚಿಕಿತ್ಸಾ ಕೇಂದ್ರದ ನೂತನ ಕಟ್ಟಡ ನಿರ್ಮಾಣಕ್ಕೆ 2021ರ ಜೂನ್‌ನಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಬೈರತಿ ಬಸವರಾಜ ಭೂಮಿಪೂಜೆ ನೆರವೇರಿಸಿದ್ದರು. 2023ರ ಮೇ ವೇಳೆಗೆ ಕಟ್ಟಡ ಕಾಮಗಾರಿ ಪೂರ್ಣಗೊಂಡಿದ್ದರೂ ಜನರ ಸೇವೆಗೆ ಲಭ್ಯವಾಗಿಲ್ಲ.


Spread the love

About Laxminews 24x7

Check Also

ದಾವಣಗೆರೆಯಲ್ಲಿ ಪ್ರಚಾರಕ್ಕೆ ನಕಾರ – ಸಚಿವ ಜಮೀರ್ ಅಹ್ಮದ್ ಸೇರಿ ಮೂವರ ವಿರುದ್ಧ ಹೈಕಮಾಂಡ್‌ಗೆ ದೂರು

Spread the loveದಾವಣಗೆರೆ/ಬೆಂಗಳೂರು: ದಾವಣಗೆರೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ನಡೆಸದಿದ್ದಕ್ಕಾಗಿ ಸಚಿವ ಜಮೀರ್ ಅಹ್ಮದ್ ಸೇರಿದಂತೆ ಮೂವರ ವಿರುದ್ಧ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ