ಬಳ್ಳಾರಿ : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್ ಬೆನ್ನು ನೋವಿನಿಂದ ನರಳಾಡುತ್ತಿದ್ದು, ಜೈಲಿನಲ್ಲಿಯೇ ಬೆನ್ನು ನೋವಿಗೆ ಚಿಕಿತ್ಸೆ ಪಡೆಯಲು ಮುಂದಾಗಿದ್ದಾರೆ.
ಕೊಲೆ ಆರೋಪಿ ನಟ ದರ್ಶನ್ ಬಳ್ಳಾರಿ ಕೇಂದ್ರ ಕಾರಾಗೃಹ ಜೈಲಿನಲ್ಲಿ ತೀವ್ರ ಬೆನ್ನು ನೋವಿನಿಂದ ಬಳಲುತ್ತಿದ್ದು, ನಿಲ್ಲುವುದಕ್ಕೂ ಆಗದೇ, ನಡೆಯುವುದಕ್ಕೂ ಆಗದೇ ನರಳಾಡುತ್ತಿದ್ದಾರೆ.
ವಕೀಲ ರಾಮ್ ಸಿಂಗ್ ಜೈಲಿಗೆ ಬಂದಿದ್ದ ವೇಳೆ ದರ್ಶನ್ ನಡೆಯುವಾಗ ಪದೇ ಪದೇ ಬೆನ್ನು ಹಿಡಿದುಕೊಂಡು ನಡೆಯುತ್ತಿದ್ದು. ಕೆಲ ಸಲ ಗೋಡೆ ಆಸರೆ ಪಡೆದು ನಿಂತು ಮಾತನಾಡಿದ್ದಾರೆ.
ತೀವ್ರ ಬೆನ್ನುನೋವಿನಿಂದ ಬಳಲುತ್ತಿರುವ ನಟ ದರ್ಶನ್ ಇದೀಗ ಪತ್ನಿ ವಿಜಯಲಕ್ಷ್ಮೀ ಮನವೊಲಿಕೆ ಬಳಿಕ ಜೈಲಿನಲ್ಲಿಯೇ ಬೆನ್ನು ನೋವಿಗೆ ಚಿಕಿತ್ಸೆ ಪಡೆಯಲು ಒಪ್ಪಿದ್ದಾಗಿ ತಿಳಿದುಬಂದಿದೆ.