ಬೆಳಗಾವಿ: ಇಲ್ಲಿನ ಸಾಂಬ್ರಾ ವಿಮಾನ ನಿಲ್ದಾಣವನ್ನು ಬಾಂಬ್ ಇಟ್ಟು ಸ್ಫೋಟ ಮಾಡುವುದಾಗಿ ಇ ಮೇಲ್ ಮೂಲಕ ಸಂದೇಶ ಕಳಿಸಲಾಗಿದೆ. ಇದರಿಂದ ಎಚ್ಚೆತ್ತ ಅಧಿಕಾರಿಗಳು ಹೆಚ್ಚಿನ ಪೊಲೀಸ್ ಭದ್ರತೆ ಒದಗಿಸಿದ್ದಾರೆ.
ವಿಮಾನ ನಿಲ್ದಾಣದ ನಿರ್ದೇಶಕ ತ್ಯಾಗರಾಜ್ ಅವರ ಇಮೇಲ್‌ಗೆ ಚೈನ್ನೈನಿಂದ ಅಪರಿಚಿತರಿಂದ ಬೆದರಿಕೆ ಪತ್ರದ ಮೇಲ್ ಬಂದಿದೆ.
ಶ್ವಾನದಳ, ಬಾಂಬ್ ಸ್ಕ್ವಾಡನಿಂದ ವಿಮಾನ ನಿಲ್ದಾಣದಲ್ಲಿ ಪರಿಶೀಲನೆ ನಡೆಸಲಾಯಿತು.
ಈ ಬಗ್ಗೆ ತ್ಯಾಗರಾಜ ಅವರು ಮಾರಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.