Breaking News

ಬೆಂಗಳೂರಿನಲ್ಲಿ ವರುಣಾರ್ಭಟಕ್ಕೆ 20 ಕ್ಕೂ ಹೆಚ್ಚು ಶಾಲಾ ಬಸ್ ಗಳು ಜಲಾವೃತ

Spread the love

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಭಾರೀಮಳೆಯಾಗುತ್ತಿದ್ದು, ಸಾಲು ಸಾಲು ಅವಾಂತರ ಸೃಷ್ಟಿಯಾಗಿದೆ. ಹಲವಡೆ ಜನಜೀವನ ಅಸ್ತವ್ಯಸ್ಥಗೊಂಡಿದೆ. ಹೆಚ್ ಎಸ್ ಆರ್ ಲೇಔಟ್ ನಲ್ಲಿ 20 ಕ್ಕೂ ಹೆಚ್ಚು ಶಾಲಾ ಬಸ್ ಗಳು ಜಲಾವೃತವಾಗಿದೆ.

ಬೆಂಗಳೂರಿನ ಹಲವು ಕಡೆ ಧಾರಾಕಾರ ಮಳೆಯಾಗಿದ್ದು, ಹಲವೆಡೆ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ.

ಹಲವೆಡೆ ರಸ್ತೆಗಳು ಜಲಾವೃತಗೊಂಡಿವೆ. ರಸ್ತೆಯಲ್ಲಿ ನೀರು ಹರಿಯುತ್ತಿರುವುದರಿಂದ ವಾಹನ ಸವಾರರು ಪರದಾಟ ನಡೆಸಿದ್ದಾರೆ. ರಸ್ತೆಯ ಗುಂಡಿಯಲ್ಲಿ ಎರಡು ಆಟೋ ಸಿಲುಕಿಕೊಂಡಿದ್ದು, ಆಟೋಗಳನ್ನು ಮೇಲೆತ್ತಲು ಚಾಲಕಾರು ಪರದಾಟ ನಡೆಸಿದ್ದಾರೆ. ಬೆಂಗಳೂರಿನ ಹೆಚ್ ಎಸ್ ಆರ್ ಲೇಔಟ್ ನಲ್ಲಿ ಧಾರಾಕಾರ ಮಳೆಗೆ ರಸ್ತೆಯಲ್ಲಿ ನಿಲ್ಲಿಸಿದ್ದ 20 ಕ್ಕೂ ಹೆಚ್ಚು ಬಸ್ ಗಳು ಜಲಾವೃತಗೊಂಡಿವೆ.

ಮೆಜೆಸ್ಟಿಕ್, ಮೈಸೂರು ಬ್ಯಾಂಕ್ ಸರ್ಕಲ್, ವಿಧಾನಸೌಧ, ಶಾಂತಿನಗರ, ಜಯನಗರ, ತ್ಯಾಗರಾಜನಗರ, ಶ್ರೀನಗರ, ಕೆಆರ್ ಮಾರುಕಟ್ಟೆ, ಟೌನ್ ಹಾಲ್, ಕಾರ್ಪೊರೇಷನ್ ಸರ್ಕಲ್, ಮೈಸೂರು ರಸ್ತೆ, ವಿಜಯನಗರ, ಮಾಗಡಿ ರಸ್ತೆ, ರಾಜಾಜಿನಗರ ಹಾಗೂ ಮಲ್ಲೇಶ್ವರಂ, ಜಾಲಹಳ್ಳಿ, ಹೆಬ್ಬಾಳ, ಯಲಹಂಕ, ಬನ್ನೇರುಘಟ್ಟ ರಸ್ತೆ, ಕೆಆರ್ ಪುರಂ, ಟಿನ್ ಫ್ಯಾಕ್ಟರಿ, ಮಹದೇವಪುರ, ಬೆಳ್ಳಂದೂರು, ಮಾರತಹಳ್ಳಿ, ಕಾಡುಬೀಸನಹಳ್ಳಿ, ಸಿಲ್ಕ್ ಬೋರ್ಡ್, ಬಿಟಿಎಂ ಲೇಔಟ್, ಜೆಪಿ ನಗರ, ಬನಶಂಕರಿ, ಕತ್ರಿಗುಪ್ಪೆ, ಪದ್ಮನಾಭನಗರ, ನಾಯಂಡಹಳ್ಳಿ, ಕೆಂಗೇರಿ, ನಾಗರಬಾವಿ, ಆರ್.ಆರ್. ನಗರ, ಕೋಣನಕುಂಟೆ, ತಲಘಟ್ಟಪುರ ಸೇರಿದಂತೆ ಹಲವಡೆ ಭಾರೀ ಮಳೆಯಾಗುತ್ತಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ.


Spread the love

About Laxminews 24x7

Check Also

ಬಳ್ಳಾರಿ ನಗರದ ಬೀದಿ ಬೀದಿಯಲ್ಲೂ ಯಂಗ್‌ಸ್ಟರ್ಸ್ ಗ್ಯಾಂಗ್‌ಸ್ಟರ್ಸ್ ಆಗಿದ್ದಾರೆ: ಜನಾರ್ದನ ರೆಡ್ಡಿ ಕಳವಳ

Spread the loveಬೆಂಗಳೂರು: ಬಳ್ಳಾರಿ ನಗರದ ಬೀದಿ ಬೀದಿಯಲ್ಲೂ ಯಂಗ್‌ಸ್ಟರ್ಸ್ ಗ್ಯಾಂಗ್‌ಸ್ಟರ್ಸ್ ಆಗಿದ್ದಾರೆ ಎಂದು ಶಾಸಕ ಜನಾರ್ದನ ರೆಡ್ಡಿ  ಕಳವಳ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ