Breaking News

ತುಂಗಭದ್ರಾ ನದಿಗೆ ಬಿದ್ದು ನಾಪತ್ತೆಯಾಗಿದ್ದ ಯುವಕನ ಶವ ಪತ್ತೆ

Spread the love

ದಗ: ವಿಜಯನಗರ ಜಿಲ್ಲೆ ಹೂವಿನ ಹಡಗಲಿ ವ್ಯಾಪ್ತಿಯ ತುಂಗಭದ್ರಾ ನದಿಗೆ ಬಿದ್ದು ನಾಪತ್ತೆಯಾಗಿದ್ದ ಯುವಕ ದಿನೇಶ್ ಮೃತದೇಹ‌ ಮಂಗಳವಾರ(ಅ.22) ತೀರದಲ್ಲಿ ಪತ್ತೆಯಾಗಿದೆ.

ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಹಮ್ಮಿಗಿ ಬ್ಯಾರೇಜ್ ಮೇಲಿಂದ ತುಂಗಭದ್ರಾ ನದಿಗೆ ಹಾರಿ ದಿನೇಶ್ ಆತ್ಮಹತ್ಯೆಗೆ ಯತ್ನಿಸಿದ್ದ ಎಂದು ವರದಿ ತಿಳಿಸಿದೆ.

 

ಮುಂಡರಗಿ ತಾಲೂಕು ಮುರಡಿ ತಾಂಡಾದ ಯುವಕ ದಿನೇಶ ಸಾಲದ ಸುಳಿಗೆ ಸಿಲುಕಿದ್ದು, ಇದರಿಂದಾಗಿ ಅಕ್ಟೋಬರ್ 20 (ಭಾನುವಾರ)ದಂದು ನದಿಗೆ ಹಾರಿದ್ದ.

ನೀರಿನ ಸೆಳೆತ ಹೆಚ್ಚಾಗಿದ್ದರಿಂದ ದಿನೇಶ್‌ ಕೊಚ್ಚಿಕೊಂಡು ಹೋಗಿದ್ದ. ಎರಡು ದಿನಗಳಿಂದ ಆತನ ಶವಕ್ಕಾಗಿ ಶೋಧ ನಡೆಸಲಾಗುತ್ತಿತ್ತು. ಇಂದು ಬೆಳಗ್ಗೆ ಮೃತದೇಹ ಪತ್ತೆಯಾಗಿದೆ.

ಸ್ಥಳಕ್ಕೆ ಮುಂಡರಗಿ ತಹಶಿಲ್ದಾರ ಯರಿಸ್ವಾಮಿ ಭೇಟಿ ನೀಡಿದ್ದು, ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸುವುದಾಗಿ ತಿಳಿಸಿದ್ದಾರೆ.


Spread the love

About Laxminews 24x7

Check Also

ಆರೋಗ್ಯ ಮತ್ತು ಫಿಟ್ನೆಸ್ ಕಡೆ ಗಮನ ಹರಿಸಿದರೆ ಜೀವನದಲ್ಲಿ ಸದಾಕಾಲ ಸಂತೋಷದಿಂದ ಇರಬಹುದು ಎಂದು ಮೈಸೂರಿನಲ್ಲಿ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಹೇಳಿದರು.

Spread the loveಮೈಸೂರು: ಜೀವನದಲ್ಲಿ ಸಂಪಾದನೆ ಮುಖ್ಯ. ಅದರೆ ಜೊತೆಯಲ್ಲಿ ನೆಮ್ಮದಿಯಾಗಿರಲು ಆರೋಗ್ಯವನ್ನೂ ಸಂಪಾದಿಸಬೇಕು ಎಂದು ಬಾಲಿವುಡ್ ನಟಿ ಶಿಲ್ಪ ಶೆಟ್ಟಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ