ಬೆಂಗಳೂರು: ಸಾಂಸ್ಥಿಕ ಕ್ವಾರಂಟೈನ್ ನಲ್ಲಿದ್ದ ಮಹಿಳೆಯರಿಬ್ಬರ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ಶುಕ್ರವಾರ ಬೆಳಿಗ್ಗೆ ನಡೆದಿದೆ.
ಜೈಶಂಕರ್ ಅತ್ಯಾಚಾರಕ್ಕೆ ಯತ್ನಿಸಿದ ಕಾಮುಕ. ಮುಂಬೈನಿಂದ ಆಗಮಿಸಿದ ಮಹಿಳೆಯನ್ನು ಹೆಚ್.ಎಸ್.ಆರ್. ಲೇಔಟ್ ನಲ್ಲಿರೋ ಸರ್ಕಾರಿ ವಸತಿ ನಿಲಯದಲ್ಲಿ 7 ದಿನ ಕ್ವಾರಂಟೈನ್ ಮಾಡಲಾಗಿತ್ತು. ವಸತಿ ನಿಲಯದಲ್ಲಿ ಪುರುಷರು ಮತ್ತು ಮಹಿಳೆಯರಿಗೆ ಒಂದೇ ಶೌಚಾಲಯದ ವ್ಯವಸ್ಥೆಯಿದೆ. ಶೌಚಾಲಯಕ್ಕೆ ಹೋದ ಮಹಿಳೆಗೆ ಜೈಶಂಕರ್ ಲೈಂಗಿಕ ಕಿರುಕುಳ ನೀಡಿದ್ದಾನೆ.
ಯುವತಿ ಶೌಚಾಲಯದಕ್ಕೆ ಹೊಗುತ್ತಿದ್ದಂತೆ ಹಿಂದಿನಿಂದ ಜೈಶಂಕರ ಬಾಗಿಲು ಹಾಕಿಕೊಂಡು ಲೈಂಗಿಕ ಕಿರುಕುಳ ನೀಡಿದ್ದಾನೆ. ಇಷ್ಟಕ್ಕೆ ಸುಮ್ಮನಾಗದೆ ಮತ್ತೊರ್ವ ಯುವತಿಯ ಮೇಲೆ ಅತ್ಯಾಚಾರಕ್ಕೆ ಪ್ರಯತ್ನಿಸಿದ್ದಾನೆ. ಕಾಮುಕ ಜೈ ಶಂಕರ್ ವಿರುದ್ಧ ಹೆಚ್.ಎಸ್.ಆರ್ ಲೇವೌಟ್ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಎರಡು ದೂರು ದಾಖಲಾಗಿದೆ. ಆತನನ್ನು ಪೊಲೀಸರು ಬಂಧಿಸಿದ್ದಾರೆ.