Breaking News

ಸಂತೋಷ ಪದ್ಮಣ್ಣವರ ಕೊಲೆ ಪ್ರಕರಣ: ನಾಲ್ಕಕ್ಕೇರಿದ ಬಂಧಿತರ ಸಂಖ್ಯೆ

Spread the love

ಬೆಳಗಾವಿ: ಉದ್ಯಮಿ ಸಂತೋಷ ಪದ್ಮಣ್ಣವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯನ್ನು ಬಂಧಿಸುವ ಮೂಲಕ ಬಂಧಿತರ ಸಂಖ್ಯೆ ನಾಲ್ಕಕ್ಕೆ ಏರಿಕೆ ಆಗಿದೆ. ಎಲ್ಲ ಆರೋಪಿಗಳಿಗೂ ನಾಲ್ಕು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.

ಮಂಜುನಾಥ ತೇರ್ಕಲ್ ಎಂಬ ಆರೋಪಿಯನ್ನು ಸೋಮವಾರ ರಾತ್ರಿ ಪೊಲೀಸರು ಬಂಧಿಸಲಾಗಿದೆ.

ಎಲ್ಲ ಆರೋಪಿಗಳನ್ನು ಮಂಗಳವಾರ ನಗರದ ಎರಡನೇ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಎಲ್ಲರಿಗೂ ನಾಲ್ಕು ದಿನಗಳ ಕಾಲ ಪೊಲೀಸ್ ವಶಕ್ಕೆ ಒಪ್ಪಿಸಿ ನ್ಯಾಯಾಧೀಶರಾದ ಪಂಕಜಾ ಕೊಣ್ಣೂರ ಆದೇಶ ಹೊರಡಿಸಿದರು.

ಉದ್ಯಮಿ ಸಂತೋಷ ಪದ್ಮಣ್ಣವರ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪತ್ನಿ ಉಮಾ ಪದ್ಮಣ್ಣವರ, ಆರೋಪಿಗಳಾದ ಶೋಭಿತಗೌಡ, ಪವನ್ ಹಾಗೂ ಮಂಜುನಾಥನನ್ನು ಪೊಲೀಸರು ತೀವ್ರ ವಿಚಾರಣೆ ನಡೆಸಿದ್ದಾರೆ.


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ