Breaking News

ರಾಜ್ಯದ ಬೀಚ್ ಗಳಲ್ಲೂ ಗೋವಾ ಮಾದರಿಯಲ್ಲಿ ‘ಮದ್ಯ’ ಮಾರಾಟಕ್ಕೆ ಪ್ರವಾಸೋದ್ಯಮ ಇಲಾಖೆ ಚಿಂತನೆ!

Spread the love

ಬೆಂಗಳೂರು : ಮದ್ಯ ಪ್ರಿಯರಿಗೆ ಸಿಹಿ ಸುದ್ದಿಯೊಂದು ನೀಡಿರುವ ಪ್ರವಾಸೋದ್ಯಮ ಇಲಾಖೆಯು ನೆರೆಯ ಗೋವಾ ಬೀಚ್ ಗಳಲ್ಲಿ ಯಾವ ರೀತಿ ಮದ್ಯ ಮಾರಾಟ ಮಾಡಲಾಗುತ್ತದೆಯೊ ಅದೇ ಒಂದು ಮಾದರಿಯಲ್ಲಿ ಕರ್ನಾಟಕದ ಬೀಚ್ ಗಳಲ್ಲಿಯೂ ಸಹ ಮದ್ಯ ಮಾರಾಟಕ್ಕೆ ಪ್ರವಾಸೋದ್ಯಮ ಇಲಾಖೆ ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ.

 

ಹೌದು ರಾಜ್ಯದ ಬೀಚ್​ಗಳಿಗೆ ಪ್ರವಾಸಿಗರನ್ನು ಸೆಳೆಯುವ ಮತ್ತು ಪ್ರವಾಸೋದ್ಯಮವನ್ನು ಇನ್ನಷ್ಟು ಲಾಭದಾಯಕವನ್ನಾಗಿಸುವ ಉದ್ದೇಶದೊಂದಿಗೆ ಮಹತ್ವದ ಕ್ರಮಕ್ಕೆ ಕರ್ನಾಟಕ ಪ್ರವಾಸೋದ್ಯಮ ಇಲಾಖೆ ಮುಂದಾಗಿದೆ. ರಾಜ್ಯದ ಕರಾವಳಿಯ ಬೀಚ್​ಗಳಲ್ಲಿ ಕೂಡ ಗೋವಾದ ಮಾದರಿಯಲ್ಲಿ ಮದ್ಯ ಮಾರಾಟ, ಮದ್ಯಪಾನಕ್ಕೆ ಅನುಮತಿ ನೀಡುವ​​ ಬಗ್ಗೆ ಚಿಂತನೆ ನಡೆಸುತ್ತಿದೆ.

ಪ್ರವಾಸೋದ್ಯಮವನ್ನು ಉತ್ತೇಜಿಸಲು ಗೋವಾದ ಮಾದರಿಯಲ್ಲಿ ರಾಜ್ಯದ ಬೀಚ್‌ಗಳಲ್ಲಿ ಟೆಂಟ್​​ಗಳನ್ನು ಹಾಕುವುದು ಮತ್ತು ಮದ್ಯ ಮಾರಾಟ, ಮದ್ಯಪಾನಕ್ಕೆ ಅನುಮತಿ ನೀಡುವ ಪ್ರಸ್ತಾವನೆಯನ್ನು ಪರಿಶೀಲಿಸಲಾಗುತ್ತಿದೆ ಎಂದು ಪ್ರವಾಸೋದ್ಯಮ ಇಲಾಖೆ ತಿಳಿಸಿದೆ. ಮಂಗಳೂರಿನಲ್ಲಿ ನಡೆದ ‘ಕನೆಕ್ಟ್ 2024’ನಲ್ಲಿ ಮಾತನಾಡಿದ ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕ ರಾಜೇಂದ್ರ ಕೆವಿ, ಬೀಚ್​ಗಳಲ್ಲಿ ಮದ್ಯ ಬಳಕೆಯ ಮೇಲೆ ಇರುವ ನಿರ್ಬಂಧಗಳನ್ನು ಸಡಿಲಿಸುವ ಅಗತ್ಯವಿದೆ ಎಂದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ