Breaking News

ಗ್ರಾಮ ಪಂಚಾಯಿತಿ ತೆರವಾದ ಸ್ಥಾನಗಳಿಗೆ ‘ಉಪ ಚುನಾವಣಾ ವೇಳಾಪಟ್ಟಿ’ ಪ್ರಕಟ

Spread the love

ಗ್ರಾಮ ಪಂಚಾಯಿತಿ ತೆರವಾದ ಸ್ಥಾನಗಳಿಗೆ ‘ಉಪ ಚುನಾವಣಾ ವೇಳಾಪಟ್ಟಿ’ ಪ್ರಕಟ

ಳ್ಳಾರಿ : ಜಿಲ್ಲೆಯ ವಿವಿಧ ತಾಲ್ಲೂಕುಗಳ ಗ್ರಾಮ ಪಂಚಾಯಿತಿಯಲ್ಲಿ ವಿವಿಧ ಕಾರಣಗಳಿಂದ ತೆರವಾದ ಸ್ಥಾನಗಳಿಗೆ ಉಪ ಚುನಾವಣೆ ನಡೆಸಲು ಚುನಾವಣಾ ವೇಳಾಪಟ್ಟಿ ಪ್ರಕಟಿಸಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಆದೇಶಿಸಿದ್ದಾರೆ.

ನಾಮಪತ್ರಗಳನ್ನು ಸಲ್ಲಿಸಲು ನ.12 ರಂದು ಕೊನೆಯ ದಿನವಾಗಿರುತ್ತದೆ.

ನ.13 ರಂದು ನಾಮ ಪತ್ರಗಳನ್ನು ಪರಿಶೀಲಿಸುವ ದಿನವಾಗಿರುತ್ತದೆ. ಉಮೇದುವಾರಿಕೆಯನ್ನು ಹಿಂತೆಗೆದುಕೊಳ್ಳಲು ನ.15 ಕೊನೆಯ ದಿನವಾಗಿರುತ್ತದೆ. ಮತದಾನವು ನ.23 ರಂದು ನಡೆಯಲಿದೆ.

ಮಾದರಿ ನೀತಿ ಸಂಹಿತೆಯು ನ.06 ರಿಂದ ನ.26 ರ ವರೆಗೆ ಚುನಾವಣೆ ನಡೆಯುವ ಗ್ರಾಮ ಪಂಚಾಯಿತಿ ವ್ಯಾಪ್ತಿ ಪ್ರದೇಶಕ್ಕೆ ಮಾತ್ರ ಜಾರಿ ಇರುತ್ತದೆ. ಚುನಾವಣೆಯನ್ನು ಶಾಂತಿಯುತವಾಗಿ ಹಾಗೂ ಮುಕ್ತವಾಗಿ ನಡೆಸುವ ಹಿನ್ನಲೆಯಲ್ಲಿ ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಆಯಾ ತಾಲ್ಲೂಕು ತಹಶೀಲ್ದಾರರ ಉಸ್ತುವಾರಿಯಲ್ಲಿ ತಾಲ್ಲೂಕು ಮಟ್ಟದ ಎಂಸಿಸಿ ತಂಡಗಳನ್ನು ರಚಿಸಿ ಜಿಲ್ಲಾಧಿಕಾರಿಯವರು ಆದೇಶಿಸಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ