Breaking News

ಮೈತ್ರಿ ಅಭ್ಯರ್ಥಿಯಾಗಿ ಇಂದು ನಿಖಿಲ್‌ ನಾಮಪತ್ರ ಸಲ್ಲಿಕೆ

Spread the love

ರಾಮನಗರ: ಎನ್‌ಡಿಎ ಮೈತ್ರಿ ಕೂಟದ ಅಭ್ಯರ್ಥಿ ನಿಖಿಲ್‌ ಕುಮಾರಸ್ವಾಮಿ ಶುಕ್ರವಾರ ನಾಮಪತ್ರ ಸಲ್ಲಿಸಲಿದ್ದಾರೆ. ಯೋಗೇಶ್ವರ್‌ ಕೊನೆ ಕ್ಷಣದಲ್ಲಿ ಕೈ ಹಿಡಿದ ಹಿನ್ನೆಲೆಯಲ್ಲಿ ನಿಖಿಲ್‌ ಕುಮಾರಸ್ವಾಮಿ ಅವರನ್ನು ಎನ್‌ಡಿಎ ಅಭ್ಯರ್ಥಿಯಾಗಿ ಮೈತ್ರಿ ಪಕ್ಷದ ನಾಯಕರು ಘೋಷಣೆ ಮಾಡಿದ್ದಾರೆ.

ನಾಮಪತ್ರ ಸಲ್ಲಿಕೆಯ ಹಿನ್ನೆಲೆಯಲ್ಲಿ ಶಕ್ತಿಪ್ರದರ್ಶನಕ್ಕೆ ಜೆಡಿಎಸ್‌ ಸಿದ್ಧತೆ ಮಾಡಿಕೊಂಡಿದೆ.

ಕೊನೆ ಕ್ಷಣದವರೆಗೂ ಎನ್‌ಡಿಎ ಅಭ್ಯರ್ಥಿಯಾಗಿ ನಿಖಿಲ್‌ ಕುಮಾರಸ್ವಾಮಿ ಅಥವಾ ಜಯಮುತ್ತು ಅವರನ್ನು ಕಣಕ್ಕಿಳಿಸುವ ಬಗ್ಗೆ ಚರ್ಚೆ ನಡೆಯುತಿತ್ತು. ಇಬ್ಬರೂ ಚುನಾವಣಾ ಧಿಕಾರಿ ಕಚೇರಿಯಿಂದ ನಾಮಪತ್ರ ಅರ್ಜಿಯನ್ನು ಪಡೆದುಕೊಂಡು, ಬ್ಯಾಂಕ್‌ನಲ್ಲಿ ಚುನಾವಣ ಖಾತೆಯನ್ನು ಪ್ರತ್ಯೇಕವಾಗಿ ತೆರೆದಿದ್ದರು.

ಅಂತಿಮವಾಗಿ ನಿಖಿಲ್‌ ಅವರ ಹೆಸರು ಅಖೈರುಗೊಂಡಿದ್ದು, ಶುಕ್ರವಾರ ಶಕ್ತಿ ಪ್ರದರ್ಶನಕ್ಕೆ ಮೈತ್ರಿಪಕ್ಷಗಳು ಸಿದ್ಧತೆ ಮಾಡಿಕೊಂಡಿವೆ.ನಾಮಪತ್ರ ಸಲ್ಲಿಕೆಯ ವೇಳೆ ಮಾಜಿ ಸಿ.ಎಂ. ಯಡಿಯೂರಪ್ಪ, ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ, ವಿಪಕ್ಷ ನಾಯಕ ಆರ್‌. ಅಶೋಕ್‌ ಪಾಲ್ಗೊಳ್ಳಲಿದ್ದಾರೆ.


Spread the love

About Laxminews 24x7

Check Also

2026ರ ಮೊದಲ ಚಂದ್ರಗ್ರಹಣ: ಈ ರಾಶಿಯವರಿಗೆ ಒಲಿಯಲಿದೆ ರಾಜಯೋಗ ಹೋಳಿ ಹಬ್ಬದಂದೇ ಯಾರಿಗೆ ಅದೃಷ್ಟ? ಯಾರಿಗೆ ಎಚ್ಚರಿಕೆ?

Spread the love2026ರ ವರ್ಷವು ಆಧ್ಯಾತ್ಮಿಕವಾಗಿ ಸಂಚಲನ ಮೂಡಿಸಲು ಸಜ್ಜಾಗಿದೆ. ಈ ಬಾರಿ ಬಣ್ಣಗಳ ಹಬ್ಬ ಹೋಳಿಯ ಸಂಭ್ರಮದ ನಡುವೆಯೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ