Breaking News

ಹಾಡಹಗಲೇ ಮನೆಯಿಂದ ಕಳವು

Spread the love

ಕುಂದಾಪುರ: ಹಾಡಹಗಲೇ ಜನನಿಬಿಡ ಪ್ರದೇಶವಾದ ಹಂಗಳೂರಿನ ಬ್ರಹ್ಮಗುಡಿ ರಸ್ತೆಯಲ್ಲಿನ ಮನೆಯೊಂದಕ್ಕೆ ನುಗ್ಗಿದ ಕಳ್ಳರು ಹಣ ಹಾಗೂ ಚಿನ್ನಾಭರಣ ಕದ್ದು ಪರಾರಿಯಾದ ಘಟನೆ ಗುರುವಾರ ನಡೆದಿದೆ.

ಬ್ರಹ್ಮಗುಡಿಯ ಜಗದೀಶ್‌ ಚಂದ್ರ ನಾಯರ್‌ ಅವರ ಮನೆಗೆ ಗುರುವಾರ ಮಧ್ಯಾಹ್ನ 2ರಿಂದ 4 ಗಂಟೆಯ ಮಧ್ಯದ ಅವಧಿಯಲ್ಲಿ ನುಗ್ಗಿದ ಕಳ್ಳರು ಮನೆಯೊಳಗಿದ್ದ ಸುಮಾರು 25-30 ಸಾವಿರ ರೂ.

ಹಾಗೂ ಚಿನ್ನಾಭರಣಗಳನ್ನು ಕದ್ದೊಯ್ದಿದ್ದಾರೆ ಎನ್ನಲಾಗಿದೆ. ಕಳವಾಗಿರುವ ಸೊತ್ತುಗಳ ನಿಖರ ಮಾಹಿತಿ ಇನ್ನಷ್ಟೇ ಸಿಗಬೇಕಿದೆ.

ಜಗದೀಶ್‌ ಕುಂದಾಪುರದಲ್ಲಿ ಪ್ರಿಂಟಿಂಗ್‌ ಪ್ರಸ್‌ ಕೆಲಸ ಮಾಡಿಕೊಂಡಿದ್ದು, ಪತ್ನಿಯೂ ಅವರ ಜತೆಯಲ್ಲೇ ಇರುತ್ತಾರೆ. ಮಧ್ಯಾಹ್ನ 2 ಗಂಟೆಗೆ ಇಬ್ಬರು ಊಟ ಮಾಡಿ ಮನೆಯಿಂದ ತೆರಳಿದ್ದಾರೆ. ಸಂಜೆ 4 ಗಂಟೆಗೆ ಪುತ್ರಿಯನ್ನು ಶಾಲೆಯಿಂದ ಮನೆಗೆ ಕರೆದುಕೊಂಡು ಬರುವ ವೇಳೆ ಜಗದೀಶ್‌ ಅವರಿಗೆ ಮನೆಯ ಹಿಂಬದಿಯ ಬಾಗಿಲು ಒಡೆದು, ಕಳ್ಳತನ ನಡೆಸಿರುವುದು ಬೆಳಕಿಗೆ ಬಂದಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ