Breaking News

ರಾಜ್ಯ ಸರ್ಕಾರದಿಂದ ಜನತೆಗೆ ಮತ್ತೊಂದು ಗುಡ್ ನ್ಯೂಸ್ : `ಗೃಹ ಆರೋಗ್ಯ ಯೋಜನೆ’ಯಡಿ ಮನೆ ಬಾಗಿಲಲ್ಲೇ ಸಿಗಲಿವೆ ಈ ಎಲ್ಲಾ ಸೇವೆಗಳು!

Spread the love

ಬೆಂಗಳೂರು : ಆರೋಗ್ಯ ಇಲಾಖೆಯ ಮಹತ್ವಾಕಾಂಕ್ಷಿ ʼಗೃಹ ಆರೋಗ್ಯ: ಆರೋಗ್ಯ ಸೇವೆ ಮನೆ ಬಾಗಿಲಿಗೆʼ ಯೋಜನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಾರ್ಪಣೆಗೊಳಿಸಿದರು.

ಈ ಯೋಜನೆಯಡಿ ಗ್ರಾಮೀಣ ಪ್ರದೇಶದ 30 ವರ್ಷ ಮೇಲ್ಪಟ್ಟ ಎಲ್ಲಾ ನಾಗರಿಕರಿಗೂ ಸಕ್ಕರೆ ಕಾಯಿಲೆ, ರಕ್ತದೊತ್ತಡ (ಬಿಪಿ), ಬಾಯಿ, ಸ್ತನ, ಗರ್ಭಕಂಠದ ಕ್ಯಾನ್ಸರ್‌ ಹಾಗೂ ಮಾನಸಿಕ ಆರೋಗ್ಯಕ್ಕೆ ಸಂಬಂಧಿಸಿದ ಪ್ರಾಥಮಿಕ ಹಂತದ ತಪಾಸಣೆಗಳು ಮನೆ ಬಾಗಿಲಲ್ಲಿ ದೊರೆಯಲಿವೆ.

ರಾಜ್ಯ ಸರ್ಕಾರದಿಂದ ಜನತೆಗೆ ಮತ್ತೊಂದು ಗುಡ್ ನ್ಯೂಸ್ : `ಗೃಹ ಆರೋಗ್ಯ ಯೋಜನೆ'ಯಡಿ ಮನೆ ಬಾಗಿಲಲ್ಲೇ ಸಿಗಲಿವೆ ಈ ಎಲ್ಲಾ ಸೇವೆಗಳು!

ಮನೆ ಬಾಗಿಲಿಗೆ ಆರೋಗ್ಯ ಸೇವೆಗಳನ್ನು ನೀಡಲು ಆರೋಗ್ಯ ಇಲಾಖೆಯು ‘ಗೃಹ ಆರೋಗ್ಯ’ ಯೋಜನೆಯನ್ನು ಜಾರಿಗೆ ತರುತ್ತಿದೆ. ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಯೋಜನೆಗೆ ಚಾಲನೆ ನೀಡಲಿದ್ದಾರೆ. ಪ್ರಾರಂಭಿಕವಾಗಿ ಕೋಲಾರ ಜಿಲ್ಲೆಯಲ್ಲಿ ಜಾರಿ ಮಾಡಲಾಗುವುದು. ಜನವರಿ 2025 ರಿಂದ ರಾಜ್ಯಾದ್ಯಂತ ವಿಸ್ತರಣೆ ಮಾಡಲಾಗುವುದು.

ಗೃಹ ಆರೋಗ್ಯ ಯೋಜನೆಯಡಿ ಮನೆ ಬಾಗಿಲಲ್ಲೇ ಸಿಗಲಿವೆ ಈ ಎಲ್ಲಾ ಸೇವೆಗಳು

ಜನರ ಮನೆ ಬಾಗಿಲಿಗೆ ಆರೋಗ್ಯ ಸೇವೆಗಳು

ಅಸಾಂಕ್ರಾಮಿಕ ರೋಗಗಳ ಪತ್ತೆ ಮತ್ತು ಚಿಕಿತ್ಸೆಗಾಗಿ ರಾಜ್ಯ ಆರೋಗ್ಯ ಇಲಾಖೆಯಿಂದ ವಿನೂತನ ಯೋಜನೆ

ಮಧುಮೇಹ, ಅಧಿಕ ರಕ್ತದೊತ್ತಡ ಸಂಬಂಧ ಪರೀಕ್ಷೆ

ಬಾಯಿ, ಸ್ತನ, ಗರ್ಭಕಂಠದ ಕ್ಯಾನ್ಸ‌ರ್ ಹಾಗೂ ಮಾನಸಿಕ ಆರೋಗ್ಯಕ್ಕೆ ಸ೦ಬ೦ಧಿಸಿದಂತೆ ಪ್ರಾಥಮಿಕ ಹಂತದ ತಪಾಸಣೆ

ಆರೋಗ್ಯ ಕಾರ್ಯಕರ್ತರ ತಂಡದಿಂದ ಗ್ರಾಮೀಣ ಭಾಗದ 30 ವರ್ಷ ಮೇಲ್ಪಟ್ಟ ಎಲ್ಲಾ ನಾಗರಿಕರ ಮನೆಗಳಿಗೆ ಭೇಟಿ

ಸಾರ್ವಜನಿಕರ ಆರೋಗ್ಯ ತಪಾಸಣೆ ಮತ್ತು ದಾಖಲಾತಿ

ಅವಶ್ಯಕತೆ ಇರುವವರಿಗೆ ಉಚಿತ ಔಷಧ ವಿತರಣೆ

ಮಧುಮೇಹ ಮತ್ತು ಅಧಿಕ ರಕ್ತದೊತ್ತಡ ಕಾಯಿಲೆಗಳಿಗೆ ವೈದ್ಯರ ಸಲಹೆಯಂತೆ ನಿರಂತರ ಉಚಿತ ಔಷಧಿಗಳ ವಿತರಣೆ

ಅಸಾಂಕ್ರಾಮಿಕ ರೋಗಗಳನ್ನು ಪ್ರಾರಂಭಿಕ ಹಂತದಲ್ಲೇ ಪತ್ತೆ ಹಚ್ಚಿ ನಿರಂತರ ಉಚಿತ ತಪಾಸಣೆ


Spread the love

About Laxminews 24x7

Check Also

ಮಾಳಮಾರುತಿ ಪೊಲೀಸ್ ಠಾಣೆಯ ಸಿಪಿಐ ಜೆ.ಎಂ.ಕಾಲೆಮಿರ್ಚಿ ಪುಂಡ ಎಂಇಎಸ್ ಮುಖಂಡನ ಜೊತೆಗೆ ಸೆಲ್ಪಿ

Spread the loveಕರ್ನಾಟಕ‌ ರಾಜ್ಯೋತ್ಸವದಲ್ಲಿ ಕರಾಳ ದಿನಾಚರಣೆ ಮಾಡಲು ಎಂಇಎಸ್ ಗೆ ಅನುಮತಿ ಕೊಡುವುದಿಲ್ಲ ಎಂದು ರಾತ್ರೋರಾತ್ರಿ ಈ‌ ಮೊದಲು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ