Breaking News

ಕಿಡ್ನ್ಯಾಪರ್ಸ್‌ ಗೆ ಗುಂಡಿನ ರುಚಿ ತೋರಿಸಿ ಮಕ್ಕಳನ್ನು ರಕ್ಷಿಸಿದ ಪೊಲೀಸರು

Spread the love

ಬೆಳಗಾವಿ: ಅಪಹರಣಕಾರರ ಕಾಲಿಗೆ ಗುಂಡು ಹೊಡೆದ ಪೊಲೀಸರು ಮಕ್ಕಳನ್ನು ರಕ್ಷಿಸಿದ ಘಟನೆ ಅಥಣಿ ಪೊಲೀಸ್ ಠಾಣೆ ವ್ಯಾಪ್ತಿಯ ಹುಲಗಬಾಳಿ ರಸ್ತೆಯ ಬಳಿ ಶುಕ್ರವಾರ (ಅ.25) ಬೆಳಗ್ಗೆ ನಡೆದಿದೆ.

ಪೊಲೀಸರು ಮೂವರು ಅಪಹರಣಕಾರರನ್ನು ಬಂಧಿಸಿದ್ದಾರೆ. ಚಿಕ್ಕೋಡಿ ತಾಲೂಕಿನ ರವಿಕಿರಣ, ಬಿಹಾರ ಮೂಲದ ಶಾರುಖ್ ಶೇಖ್ ಮತ್ತು ಕೊಲ್ಲಾಪುರ ಜಿಲ್ಲೆಯ ಸಂಬಾ ಕಾಂಬಳೆ ಎಂಬ ಆರೋಪಿಗಳನ್ನು ಬಂಧಿಸಲಾಗಿದೆ.

Belagavi: ಕಿಡ್ನ್ಯಾಪರ್ಸ್‌ ಗೆ ಗುಂಡಿನ ರುಚಿ ತೋರಿಸಿ ಮಕ್ಕಳನ್ನು ರಕ್ಷಿಸಿದ ಪೊಲೀಸರು

ಅಥಣಿಯ ಹುಲಗಬಾಳಿ ರಸ್ತೆಯ ಸ್ವಾಮಿ ಬಡಾವಣೆಯ ವಿಜಯ ದೇಸಾಯಿ ಎಂಬುವರ ಮನೆಗೆ ನುಗ್ಗಿದ ದುಷ್ಕರ್ಮಿಗಳು ನಾಲ್ಕು ಮತ್ತು ಮೂರು ವರ್ಷದ ಮಕ್ಕಳನ್ನು ಅಪಹರಿಸಿ ಪರಾರಿಯಾಗಿದ್ದರು.

ವಿಷಯ ತಿಳಿದ ಅಥಣಿ ಪೊಲೀಸರು ಮೂರು ತಂಡ ರಚಿಸಿ ಕಾರ್ಯಾಚರಣೆ ನಡೆಸಿದ್ದರು. ಮಹಾರಾಷ್ಟ್ರದ ಗಡಿ ಕೋಹಳ್ಳಿ ಸಿಂಧೂರ ಬಳಿ ಪೊಲೀಸರು ಅಪಹರಣಕಾರರನ್ನು ತಡೆಗಟ್ಟಿದ್ದಾರೆ.

ಆಗ ದುಷ್ಕರ್ಮಿಗಳು ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದಾರೆ. ಆಗ ಪೊಲೀಸರು ಆತ್ಮರಕ್ಷಣೆಗೆ ಗುಂಡು ಹಾರಿಸಿ ಮೂವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೀಮಾಶಂಕರ ಗುಳೇದ ತಿಳಿಸಿದ್ದಾರೆ.


Spread the love

About Laxminews 24x7

Check Also

ಪ್ರಸಕ್ತ ಸಾಲಿನ ಪದವಿ ಪೂರ್ವ ಕಾಲೇಜುಗಳ ಬಾಲಕ, ಬಾಲಕಿಯರ ರಾಜ್ಯಮಟ್ಟದ ಸ್ಕೇಟಿಂಗ್ ಸ್ಪರ್ಧೆಯನ್ನು ನ.26 ರಿಂದ ಮಾಲಿನಿ ಸಿಟಿ ಆವರಣದಲ್ಲಿ ಆಯೋಜಿಸಲಾಗಿದೆ ಎಂದು ಎಸ್.ಎನ್.ದೇಸಾಯಿ ಹೇಳಿದರು.

Spread the loveಬೆಳಗಾವಿ :ಪ್ರಸಕ್ತ ಸಾಲಿನ ಪದವಿ ಪೂರ್ವ ಕಾಲೇಜುಗಳ ಬಾಲಕ, ಬಾಲಕಿಯರ ರಾಜ್ಯಮಟ್ಟದ ಸ್ಕೇಟಿಂಗ್ ಸ್ಪರ್ಧೆಯನ್ನು ನ.26 ರಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ