ಮುಡಾ ಹಗರಣ : `CM ಸಿದ್ದರಾಮಯ್ಯ’ ವಿಚಾರಣೆಗೆ ಲೋಕಾಯುಕ್ತ ಸಿದ್ಧತೆ!
ಮೈಸೂರು : ಮುಡಾ ಹಗರಣ ಸಂಬಂಧ ಲೋಕಾಯುಕ್ತ ಪೊಲೀಸರು ಈಗಾಗಲೇ ವಿಚಾರಣೆ ನಡೆಸುತ್ತಿದ್ದು, ಇದೀಗ ಸಿಎಂ ಸಿದ್ದರಾಮಯ್ಯ ಅವರಿಗೆ ನೋಟಿಸ್ ನೀಡಿ ವಿಚಾರಣೆಗೆ ಕರೆಯಲು ಸಿದ್ಧತೆ ನಡೆಸಲಾಗಿದೆ.
ಮುಡಾ ಹಗರಣ ಸಂಬಂಧ ಪ್ರಕರಣದ 3 ನೇ ಆರೋಪಿ, ಸಿದ್ದರಾಮಯ್ಯ ಭಾಮೈದ ಮಲ್ಲಿಕಾರ್ಜುನ ಸ್ವಾಮಿ, 4 ನೇ ಆರೋಪಿ ಜಮೀನಿನ ಮಾಲೀಕ ದೇವರಾಜು ವಿಚಾರಣೆ ಮಾಡಲಾಗಿತ್ತು.
ಶುಕ್ರವಾರ 2 ನೇ ಆರೋಪಿ ಸಿಎಂ ಸಿದ್ದರಾಮಯ್ಯ ಪತ್ನಿ ಬಿ. ಎಂ.ಪಾರ್ವತಿ ವಿಚಾರಣೆ ನಡೆಸಿದ್ದರು. ಇದೀಗ ಪ್ರಕರಣದಲ್ಲಿ ಸಿಎಂ ಪಾತ್ರದ ಬಗ್ಗೆ ಲೋಕಾಯುಕ್ತ ಪೊಲೀಸರು ತನಿಖೆ ಮಾಡಿ ನ್ಯಾಯಾಲಯಕ್ಕೆ ವರದಿ ಸಲ್ಲಿಸಲಿದ್ದಾರೆ ಎನ್ನಲಾಗಿದೆ.
ಮುಡಾ ಅಕರಣಕ್ಕೆ ಸಂಬಂಧಪಟ್ಟಂತೆ ಇಡಿ ಅಧಿಕಾರಿಗಳು ಮೈಸೂರಿನ ಮುಡಾ ಕಚೇರಿಯಲ್ಲಿ ಠಿಕಾಣಿ ಹೂಡಿದ್ದು, ಎಲ್ಲಾ ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ ಇದರ ಮಧ್ಯ ಅಧಿಕಾರಿಗಳು ಸಿಎಂ ಸಿದ್ದರಾಮಯ್ಯ ಅವರನ್ನು ಕೂಡ ವಿಚಾರಣೆಗೆ ಒಳಪಡಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
Laxmi News 24×7