Breaking News

ಬಿಜೆಪಿ 2ನೇ ಪಟ್ಟಿ ಬಿಡುಗಡೆ: ಇಬ್ಬರು ಎಂಎಲ್ ಎ ಗಳಿಗೆ ಕೊಕ್

Spread the love

ಮುಂಬಯಿ: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಬಿಜೆಪಿ ಶನಿವಾರ(ಅ26) 22 ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದ್ದು, ಇಬ್ಬರು ಹಾಲಿ ಶಾಸಕರಿಗೆ ಟಿಕೆಟ್ ನಿರಾಕರಿಸಲಾಗಿದೆ.

ಪಟ್ಟಿಯಲ್ಲಿ ಆರು ಹಾಲಿ ಶಾಸಕರಿಗೆ ಮತ್ತೆ ಅವಕಾಶ ನೀಡಲಾಗಿದೆ. ಶಿವಸೇನೆ(ಶಿಂಧೆ) ಮತ್ತು ಎನ್‌ಸಿಪಿ(ಅಜಿತ್ ಪವಾರ್) ಜತೆಗೆ ಆಡಳಿತಾರೂಢ ಮಹಾಯುತಿ ಒಕ್ಕೂಟದಲ್ಲಿರುವ ಬಿಜೆಪಿ ಇದುವರೆಗೆ 121 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದಂತಾಗಿದೆ.

 

ಅಕೋಟ್, ನಾಸಿಕ್ ಸೆಂಟ್ರಲ್, ಪೆನ್, ಖಡಕ್ವಾಸಲಾ, ಪುಣೆ ಕಂಟೋನ್ಮೆಂಟ್ ಮತ್ತು ಉಲ್ಲಾಸನಗರದ ಶಾಸಕರನ್ನು ಉಳಿಸಿಕೊಂಡು ವಾಶಿಮ್ ಮತ್ತು ಗಡ್ಚಿರೋಲಿಯ ಹಾಲಿ ಶಾಸಕರನ್ನು ಬದಲಾಯಿಸಿದೆ. ಎರಡನೇ ಪಟ್ಟಿಯಲ್ಲಿ ವಿಧಾನ ಪರಿಷತ್ ನ ಇಬ್ಬರು ಸದಸ್ಯರಿಗೆ ಟಿಕೆಟ್ ನೀಡಲಾಗಿದ್ದು ಜಾಟ್‌ನಿಂದ ಗೋಪಿಚಂದ್ ಪಡಲ್ಕರ್ ಮತ್ತು ಲಾತೂರ್ ಗ್ರಾಮಾಂತರದಿಂದ ರಮೇಶ್ ಕರಾಡ್ ಅವರು ಕಾಂಗ್ರೆಸ್‌ನ ಧೀರಜ್ ದೇಶಮುಖ್ ಅವರನ್ನು ಎದುರಿಸಲಿದ್ದಾರೆ. 288 ಸದಸ್ಯ ಬಲದ ವಿಧಾನಸಭೆಗೆ ನವೆಂಬರ್ 20 ರಂದು ಚುನಾವಣೆ ನಡೆಯಲಿದೆ.


Spread the love

About Laxminews 24x7

Check Also

ನಾಯಕತ್ವ ಬದಲಾವಣೆ ವಿಚಾರವಾಗಿ ರಾಹುಲ್​ ಗಾಂಧಿ​ ತೀರ್ಮಾನಕ್ಕೆ ನಾನು ಬದ್ಧ: ಸಿಎಂ

Spread the loveಮೈಸೂರು: “ನಾಯಕತ್ವ ಬದಲಾವಣೆ ವಿಚಾರವಾಗಿ ರಾಹುಲ್​ ಗಾಂಧಿ ಮತ್ತು ಹೈಕಮಾಂಡ್​ ತೀರ್ಮಾನ ಮಾಡಬೇಕು. ಅವರು ಏನು ತೀರ್ಮಾನ ಮಾಡುತ್ತಾರೋ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ