ಮುಧೋಳ: ರೈತರ ಖಾತೆಗೆ ಬಾಕಿ ಹಣ ಜಮಾ ಮಾಡುವಂತೆ ಒತ್ತಾಯಿಸಿ ಸಮೀಪದ ಐಸಿಪಿಎಲ್ ಕಾರ್ಖಾನೆ ಎದುರು ಕಬ್ಬು ಬೆಳೆಗಾರರು ಹಾಗೂ ರೈತರು ಧರಣಿ ನಡೆಸಿದರು.
ಅ.24ರಂದು ನಗರದಲ್ಲಿ ಸಭೆ ಸೇರಿದ್ದ ರೈತರು 26ರೊಳಗೆ 2023ರ ಹಂಗಾಮಿನ ಪ್ರತಿಟನ್ನಿಗೆ ಹೆಚ್ಚುವರಿ 62ರೂ. ನೀಡಬೇಕು ಎಂದು ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿಗಳಿಗೆ ಗಡುವು ನೀಡಿದ್ದರು.
ಆದರೆ ರೈತರ ಗಡುವಿಗೆ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿ ಸ್ಪಂದನೆ ನೀಡದ ಕಾರಣ ಶನಿವಾರ ಮತ್ತೆ ಸಭೆ ಸೇರಿದ ರೈತರು ಕಾರ್ಖಾನೆ ನಡೆಯ ವಿರುದ್ದ ಆಕ್ರೋಶ ಹೊರಹಾಕಿದರು. ಬಳಿಕ ಸಕ್ಕರೆ ಕಾರ್ಖಾನೆ ಎದುರು ಧರಣಿ ಕೂರುವ ನಿರ್ಧಾರ ಕೈಗೊಂಡು ನೇರವಾಗಿ ಕಾರ್ಖಾನೆಗೆ ತೆರಳಿದರು.
ಕಾರ್ಖಾನೆ ಎದುರು ಧರಣಿ ಕುಳಿತಿರುವ ರೈತರು ಬಾಕಿ ಬಿಲ್ ಪಾವತಿಗೆ ಒತ್ತಾಯಿಸುತ್ತಿದ್ದಾರೆ.
ರೈತಸಂಘದ ಜಿಲ್ಲಾಧ್ಯಕ್ಷ ಬಸವಂತ ಕಾಂಬಳೆ, ಕಬ್ಬು ಬೆಳೆಗಾರರ ಸಂಘದ ತಾಲೂಕು ಅಧ್ಯಕ್ಷ ದುಂಡಪ್ಪ ಯರಗಟ್ಟಿ, ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಮುತ್ತಪ್ಪ ಕೋಮಾರ, ರೈತಮುಖಂಡರಾದ ಹನಮಂತ ನಬಾಬ, ಸುಭಾಷ ಶಿರಬೂರ, ಎ.ಜಿ.ಪಾಟೀಲ ಸೇರಿದಂತೆ ಇತರರು ಇದ್ದರು.
Laxmi News 24×7