Breaking News

ವ್ಯಾಪಕವಾಗಿ ಹರಡುತ್ತಿರುವ ಕೊರೊನಾ ಸೋಂಕನ್ನು ಹೋಗಲಾಡಿಸಲು ತಮ್ಮ ಜೀವವನ್ನು ಲೆಕ್ಕಿಸದೇ ಸೋಂಕಿತರನ್ನು ಪತ್ತೆಗಾಗಿ ಶ್ರಮಿಸುತ್ತಿರುವ ಆಶಾ ಕಾರ್ಯಕರ್ತರಿಗೆ ಆಹಾರ ಧಾನ್ಯಗಳ ಕಿಟ್ ವಿತರಿಸಿದರು

Spread the love

ಸವಣೂರ: ವ್ಯಾಪಕವಾಗಿ ಹರಡುತ್ತಿರುವ ಕೊರೊನಾ ಸೋಂಕನ್ನು ಹೋಗಲಾಡಿಸಲು ತಮ್ಮ ಜೀವವನ್ನು ಲೆಕ್ಕಿಸದೇ ಸೋಂಕಿತರನ್ನು ಪತ್ತೆಗಾಗಿ ಶ್ರಮಿಸುತ್ತಾ, ಸಾರ್ವಜನಿಕರಿಂದ ನಿಂದನೆಗೊಳಗಾದರೂ ಸಹ, ನಿರ್ಲಕ್ಷಿಸಿ ಸಾರ್ವಜನಿಕ ಆರೋಗ್ಯ ರಕ್ಷಣೆಗೆ ಮುಂದಾದ ಆಶಾ ಕಾರ್ಯಕರ್ತೆಯರ ಕಾರ್ಯ ಶ್ಲಾಘನೀಯವಾಗಿದೆ ಎಂದು ಬಿಜೆಪಿ ತಾಲೂಕಾಧ್ಯಕ್ಷ ಗಂಗಾಧರ ಬಾಣದ ಹೇಳಿದರು.
ಕಂದಾಯ ಇಲಾಖೆಯ ಆವರಣದಲ್ಲಿ ಆಶಾ ಕಾರ್ಯಕರ್ತರಿಗೆ ಹಾಗೂ ಪುರಸಭೆ ನೀರು ನಿರ್ವಹಣಾ ಸಿಬ್ಬಂದಿಗಳಿಗೆ ಕ್ಷಮತಾ ಸೇವಾ ಸಂಘದ ವತಿಯಿಂದ ನೀಡಲ್ಪಟ್ಟ ಆಹಾರ ಧಾನ್ಯಗಳ ಕಿಟ್ ವಿತರಿಸಿ ಮಾತನಾಡಿದರು. ಆರೋಗ್ಯ ಹಿತದೃಷ್ಟಿಯಿಂದ ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು. ಆಗಾಗ ಸ್ಯಾನಿಟೈಸರ್ ಅಥವಾ ಸಾಬೂನಿನಿಂದ ಕೈತೊಳೆದುಕೊಂಡು ಶುಚಿತ್ವದ ಬಗ್ಗೆ ಗಮನ ಹರಿಸಿದಲ್ಲಿ ಕೊರೊನಾ ತಡೆಗಟ್ಟಲು ಸಾಧ್ಯ ಎಂದರು.
ಈ ಸಂದರ್ಭದಲ್ಲಿ ಪುರಸಭೆ ಸದಸ್ಯ ಮಹದೇವ ಮಹೇಂದ್ರಕರ, ಮುಖಂಡರಾದ ಮೈಲಾರಪ್ಪ ತಳ್ಳಳ್ಳಿ, ಹನುಮಂತಗೌಡ ಮುದಿಗೌಡ್ರ, ಚನ್ನಬಸಯ್ಯ ದುರ್ಗದಮಠ, ಶಂಕರ ಪಾಟೀಲ, ಬಸವರಾಜ ಸವೂರ, ಹರೀಶ ಕ್ಷೌರದ, ಶ್ರೀನಿವಾಸ ಗಿತ್ತೆ, ಶ್ರೀಕಾಂತ ಲಕ್ಷ್ಮೇಶ್ವರ, ಪ್ರವೀಣ ಬಾಲೆಹೋಸುರ, ಫಕ್ಕಿರೇಶ ಮುದಿಗೌಡ್ರ, ಮಹೇಶ ಜಡಿ ಸೇರಿದಂತೆ ಹಲವಾರು ಪ್ರಮುಖರು ಇದ್ದರು.


Spread the love

About Laxminews 24x7

Check Also

ಸರ್ಕಾರಿ ನೌಕರನಿಗೆ ಲಂಚ ನೀಡಲು ಪತ್ನಿಯ ಮಾಂಗಲ್ಯ ಸರ ಅಡವಿಟ್ಟ ವ್ಯಕ್ತಿ

Spread the loveಹಾವೇರಿ, ಜೂನ್​ 26: ಸರ್ಕಾರಿ ನೌಕರನಿಗೆ ಲಂಚ (bribe) ನೀಡಲು ಸಂತ್ರಸ್ತ ವ್ಯಕ್ತಿ ತಮ್ಮ ಪತ್ನಿಯ ಮಾಂಗಲ್ಯ  ಸರವನ್ನು (Mangalsutra) ಅಡವಿಟ್ಟ ಘಟನೆಯೊಂದು ಹಾವೇರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ