ಬೆಂಗಳೂರು: ರಾಜ್ಯದ 4,787 ಒಳರೋಗಿ ಖಾಸಗಿ ಆಸ್ಪತ್ರೆಗಳಲ್ಲಿ ಶೇ.50 ಕ್ಕಿಂತ ಹೆಚ್ಚು ಸರಿಯಾದ ಅಗ್ನಿ ಅವಘಡಗಳ ಸುರಕ್ಷತಾ ಸಾಧನಗಳ ಕೊರತೆ ಮತ್ತು ಅಗ್ನಿ ಸುರಕ್ಷತಾ ಮಾನದಂಡಗಳಿಗೆ ಬದ್ಧವಾಗಿಲ್ಲ ಎಂದು ಕಂಡುಬಂದಿದೆ ಅಗ್ನಿಶಾಮಕ ಮತ್ತು ತುರ್ತು ಸೇವಾ ಸಿಬ್ಬಂದಿ ನಡೆಸಿದ ತಪಾಸಣೆಯಲ್ಲಿ ತಿಳಿದು ಬಂದಿದೆ.
ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇತ್ತೀಚೆಗೆ ಬೆಂಕಿ ಅವಘಡ ಸಂಭವಿಸಿದ ನಂತರ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಆರೋಗ್ಯ ಮತ್ತು ಅಗ್ನಿಶಾಮಕ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ನಂತರ, ಅಗ್ನಿ ಸುರಕ್ಷತಾ ಮುನ್ನೆಚ್ಚರಿಕೆಗಳನ್ನು ಅನುಸರಿಸಲು ಆಸ್ಪತ್ರೆಗಳಿಗೆ ಸುತ್ತೋಲೆ ಹೊರಡಿಸಲಾಯಿತು ಎಂದು ಅಗ್ನಿಶಾಮಕ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು TNIE ಗೆ ತಿಳಿಸಿದರು.
ಅಗ್ನಿಶಾಮಕ ಅಧಿಕಾರಿಗಳು ಇದುವರೆಗೆ 3,000 ಆಸ್ಪತ್ರೆಗಳಲ್ಲಿ ತಪಾಸಣೆ ನಡೆಸಿದ್ದಾರೆ. ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ (ಕೆಪಿಎಂಇ) ಉಪನಿರ್ದೇಶಕ (ವೈದ್ಯಕೀಯ-2) ಡಾ ವಿವೇಕ್ ದೊರೈ, ಕಟ್ಟುನಿಟ್ಟಾದ ಅಗ್ನಿ ಸುರಕ್ಷತಾ ಕ್ರಮಗಳನ್ನು ಜಾರಿಗೊಳಿಸಲು ಆರೋಗ್ಯ ಇಲಾಖೆ ಆಸ್ಪತ್ರೆಗಳಿಗೆ ಸೂಚಿಸಿದೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದರು. ರಾಜ್ಯವು ಪ್ರಯೋಗಾಲಯಗಳು ಮತ್ತು ಚಿಕಿತ್ಸಾಲಯಗಳು ಸೇರಿದಂತೆ ವಿವಿಧ ವಿಭಾಗಗಳಲ್ಲಿ 30,000 ಖಾಸಗಿ ಆಸ್ಪತ್ರೆಗಳನ್ನು ಹೊಂದಿದೆ. ಪ್ರಮುಖವಾಗಿ ಒಳರೋಗಿಗಳ ಕಟ್ಟಡಗಳಿಗೆ ಆದ್ಯತೆ ನೀಡಲಾಗಿದ್ದು, ನಂತರದ ಚಿಕಿತ್ಸಾಲಯಗಳು ಮತ್ತು ಇತರ ಸಂಸ್ಥೆಗಳಿಗೆ ಆದ್ಯತೆ ನೀಡಲಾಗಿದೆ ಎಂದು ಹೇಳಿದರು.