Breaking News

ನಗರದ ವಿವಿಧೆಡೆ ಪೊಲೀಸರ ಕಾರ್ಯಾಚರಣೆ: 264 ದ್ವಿಚಕ್ರ ವಾಹನ ವಶ

Spread the love

ಹುಬ್ಬಳ್ಳಿ: ‘ಹು-ಧಾ ಕಮಿಷನರೇಟ್‌ ವ್ಯಾಪ್ತಿಯ ದಕ್ಷಿಣ ಉಪವಿಭಾಗದ ವಿವಿಧೆಡೆ ಶನಿವಾರ ಕಾರ್ಯಾಚರಣೆ ನಡೆಸಿ, ಸರಿಯಾದ ದಾಖಲೆ ಇಲ್ಲದ ಒಟ್ಟು 264 ದ್ವಿಚಕ್ರ ವಾಹನಗಳು ಹಾಗೂ ಮೂರು ಆಟೊಗಳನ್ನು ವಶಕ್ಕೆ ಪಡೆಯಲಾಗಿದೆ’ ಎಂದು ಪೊಲೀಸ್ ಕಮಿಷನರ್ ಎನ್‌. ಶಶಿಕುಮಾರ್‌ ತಿಳಿಸಿದರು.

 

ಕಸಬಾಪೇಟ್‌ ಪೊಲೀಸ್‌ ಠಾಣೆಯಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಹುಬ್ಬಳ್ಳಿ ಶಹರ, ಘಂಟಿಕೇರಿ, ಕಸಬಾ, ಹಳೆ ಹುಬ್ಬಳ್ಳಿ ಹಾಗೂ ಬೆಂಡಿಗೇರಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ 14 ಕಡೆ ಚೆಕ್‌ಪೋಸ್ಟ್‌ ನಿರ್ಮಿಸಿ, ಕಾರ್ಯಾಚರಣೆ ನಡೆಸಲಾಗಿದೆ’ ಎಂದರು.

‘ವಾಹನ ಚಾಲನಾ ಪರವಾನಗಿ, ನೋಂದಣಿ, ವಿಮೆ ಪ್ರಮಾಣಪತ್ರ ಇಲ್ಲದಿರುವುದು, ಹೆಲ್ಮೆಟ್‌ ಧರಿಸದಿರುವುದು, ವಾಯುಮಾಲಿನ್ಯ ತಪಾಸಣೆ ಆಗದಿರುವ ವಾಹನಗಳು ಕಾರ್ಯಾಚರಣೆ ವೇಳೆ ಪತ್ತೆಯಾಗಿವೆ. ದೋಷಪೂರಿತ ನಂಬರ್‌ಪ್ಲೇಟ್‌ ಹಾಗೂ ನಂಬರ್‌ಪ್ಲೇಟ್‌ ಹಾಕದ ಪ್ರಕರಣಗಳಿದ್ದು, ಕಳವು ಮಾಡಿದ ವಾಹನಗಳೂ ಇವೆ’ ಎಂದು ಮಾಹಿತಿ ನೀಡಿದರು.

‘ಇದು ಐಎಂವಿ ಹಾಗೂ ಬಿಎನ್‌ಎಸ್‌ ಪ್ರಕಾರ ಅಪರಾಧವಾಗಿದ್ದು, ಪ್ರಕರಣ ದಾಖಲಿಸಿದರೆ ನ್ಯಾಯಾಲಯಕ್ಕೆ ಸೂಕ್ತ ದಾಖಲೆ ಸಲ್ಲಿಸಿ, ದಂಡ ಪಾವತಿಸಿ ವಾಹನ ಬಿಡಿಸಿಕೊಳ್ಳಬೇಕಾಗುತ್ತದೆ. ಈ ಪ್ರಕ್ರಿಯೆಗೆ ಸಮಯ ಹಿಡಿಯುವುದರಿಂದ ವಾಹನ ಸವಾರರು ಮುಂಜಾಗ್ರತೆ ವಹಿಸುವುದು ಒಳಿತು’ ಎಂದರು.

‘ಕಿರಿದಾದ ರಸ್ತೆಗಳಲ್ಲಿ ಕೆಲವರು ಅತಿ ವೇಗ ಹಾಗೂ ಅಜಾಗರೂಕತೆಯಿಂದ ವಾಹನ ಚಾಲನೆ, ನಗರದ ಹೊರ ವಲಯದಲ್ಲಿ ಅನೈತಿಕ ಚಟುವಟಿಕೆ ಸೇರಿದಂತೆ ಸಾರ್ವಜನಿಕರಿಗೆ ತೊಂದರೆ ಉಂಟು ಮಾಡುತ್ತಿರುವ ಬಗ್ಗೆ ದೂರುಗಳು ಬಂದಿದ್ದವು. ಮಹಿಳೆಯರ ಸುರಕ್ಷತೆ ದೃಷ್ಟಿಯಿಂದಲೂ ಕಾರ್ಯಾಚರಣೆ ನಡೆಸಲಾಗಿದೆ’ ಎಂದು ವಿವರಿಸಿದರು.


Spread the love

About Laxminews 24x7

Check Also

ಹಾಲಿ ಶಿಕ್ಷಕರೂ TET ಬರೆಯಬೇಕೆಂಬ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್​ಗೆ ಮೇಲ್ಮನವಿ: ಮಧು ಬಂಗಾರಪ್ಪ

Spread the loveಶಿವಮೊಗ್ಗ: “ಶಿಕ್ಷಣದಲ್ಲಿ ಗುಣಾತ್ಮಕ ಬದಲಾವಣೆ ತರಲು ನಿವೃತ್ತಿ ಅಂಚಿನಲ್ಲಿರುವವರನ್ನು ಹೊರತುಪಡಿಸಿ, ಉಳಿದೆಲ್ಲ ಶಿಕ್ಷಕರು ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ