Breaking News

ವಕ್ಫ್ ಕಾನೂನು ತೆಗೆದು ಹಾಕುವುದೇ ಸೂಕ್ತ: ಸಚಿವ ಜೋಶಿ

Spread the love

ಧಾರವಾಡ: ಭಾರತದಲ್ಲಿ ವಕ್ಫ್ ‌ಕಾನೂನು ಮಾಡಿದ್ದೇ ತಪ್ಪು. ಮೊದಲಿದನ್ನು ತೆಗೆದು ಹಾಕುವುದೇ ಸೂಕ್ತ ಎಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರ ಸಚಿವ ಪ್ರಲ್ಹಾದ ಜೋಶಿ ಹೇಳಿದರು

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೆಹರು ಕಾಲದಲ್ಲಿ ಕಾಂಗ್ರೆಸ್ ಅದೇಕೆ ವಕ್ಪ್ ಕಾನೂನು ಮಾಡಿತೋ ಗೊತ್ತಿಲ್ಲ.

ಆದರೆ, 2013ರಲ್ಲಿ ವಕ್ಫ್ ಗೆ ಮತ್ತೆ ಅಪರಿಮಿತ ಅಧಿಕಾರ ಕೊಟ್ಟಿದ್ದೇಕೆ? ದೇಶದಲ್ಲಿ ವಕ್ಫ್ ಕಾನೂನು ಮಾಡಿದ್ದೇ ಮೊದಲ ತಪ್ಪು. ಅಂತದ್ದರಲ್ಲಿ ಸುಪ್ರೀಂಕೋರ್ಟ್ ಸಹ ಪ್ರಶ್ನಿಸದಂತಹ ಪ್ರಶ್ನಾತೀತ ಅಧಿಕಾರವೇ? ಎಂದು ಪ್ರಶ್ನಿಸಿದ ಪ್ರಲ್ಹಾದ ಜೋಶಿ, ಮೊದಲು ಇದನ್ನು ತೆಗೆದು ಹಾಕಿದರೆ ಎಲ್ಲವೂ ಸರಿ ಹೋಗುತ್ತದೆ ಎಂದರು.

ಪ್ರಸ್ತುತ ಬೆಳವಣಿಗೆ ನೋಡಿದರೆ ಕಡೇ ಪಕ್ಷ ವಕ್ಫ್ ಕಾನೂನು ತಿದ್ದುಪಡಿ ತರುವ ಅವಶ್ಯಕತೆಯಿದೆ. ಅಲ್ಲಾನ ನೆಪದಲ್ಲಿ ವಕ್ಫ್ ಮೂಲಕ ಭೂ ಕಬಳಿಸುವವರಿಗೆ ಕಡಿವಾಣ ಹಾಕಬೇಕಿದೆ. ಜಗತ್ತಿನಲ್ಲೇ ಇಲ್ಲದಂತಹ ವಕ ಕಾನೂನು ನಮ್ಮಲ್ಲಿ ಇದ್ದು, ದೇಶದಲ್ಲಿ ವಕ್ಫ್ ಗೆ ಪರಿಮಿತಿಯೇ ಇಲ್ಲದಾಗಿದೆ. ಜಗತ್ತಿನ ಯಾವ ದೇಶದಲ್ಲೂ ಇಂಥ ವಕ್ಫ್ ಕಾನೂನು ಇಲ್ಲ. ಹಿಂದೂಗಳು, ರೈತರು ಎಚ್ಚೆತ್ತುಕೊಳ್ಳಬೇಕು ಎಂ‌ದರು.

ಭಾರತದ ನೆಲವನ್ನು ಅಲ್ಲಾನ ಆಸ್ತಿ ಎನ್ನಲು ಅಲ್ಲಾ ಏನು ಭಾರತದವನೆ? ಎಂದು ಪ್ರಶ್ನಿಸಿದ ಜೋಶಿ, ಅಲ್ಲಾನನ್ನು ಮುಂದಿಟ್ಟು ಆಸ್ತಿ ಕಬಳಿಸುತ್ತಿದೆ. ಮುಂದೊಂದು ದಿನ ನಾವಿರುವ ಮನೆ, ನಿಂತ ನೆಲವನ್ನೇ ವಕ್ಫ್ ತನ್ನ ಆಸ್ತಿ ಎಂದರೂ ಅಚ್ಚರಿಯಿಲ್ಲ. ಅಷ್ಟೊಂದು ಅಪರಿಮಿತ ಅಧಿಕಾರ ಕೊಟ್ಟು ತುಷ್ಟೀಕರಣದ ರಾಜಕಾರಣ ಮಾಡುತ್ತಿದೆ ಕಾಂಗ್ರೆಸ್. ಯಾವುದೇ ಕಾರಣಕ್ಕೂ ಇದನ್ನು ಸಹಿಸಲು ಸಾಧ್ಯವಿಲ್ಲ. ಇನ್ನು ರಾಜ್ಯದಲ್ಲಿ ರೈತರ ಜಾಮೀನು, ಮಠ, ದೇವಸ್ಥಾನ ಮತ್ತು ಬಡ ಮುಸ್ಲಿಮರ ಆಸ್ತಿಯನ್ನು ವಕ್ಫ್ ಮೂಲಕ ಕಬಳಿಸಲು ಸಚಿವ ಜಮೀರ್‌ಅಹ್ಮದ್ ಮತ್ತು ಕಾಂಗ್ರೆಸ್ ಪಕ್ಷ ಸಹ ಕುಮ್ಮಕ್ಕು ನೀಡಿದೆ ಎಂದು ದೂರಿದರು.

ರೈತರ ಜಮೀನು ವಕ್ಫ್ ಆಸ್ತಿ ಎಂದು ಪಹಣಿಯಲ್ಲಿ ತಿದ್ದುಪಡಿ ಮಾಡಿದ ತಹಶೀಲ್ದಾರ್‌ ಮತ್ತು ಅಧಿಕಾರಿಗಳನ್ನು ರಾಜ್ಯ ಸರ್ಕಾರ ಕೂಡಲೇ ಅಮಾನತ್ತು ಪಡಿಸಬೇಕು. ವಕ್ಫ್ ಆಸ್ತಿ ಎಂದಿರುವ ಪಗಣಿಗಳನ್ನು ಜಿಲ್ಲಾಧಿಕಾರಿ ಕೂಡಲೇ ಸರಿಪಡಿಸಬೇಕು. ರೈತರು ದಾಖಲೆ ಸಲ್ಲಿಸಲಿ ಎನ್ನುತ್ತಿದ್ದಾರೆ. ವಕ್ಫ್ ಹೆಸರು ನಮೂದು ಮಾಡುವಾಗ ದಾಖಲೆ ಕೇಳಿದ್ದರಾ? ಎಂದ ಸಚಿವ ಜೋಶಿ, ಜಿಲ್ಲಾಧಿಕಾರಿ ತಕ್ಷಣವೇ ಯಾವುದೇ ಸಬೂಬು ನೀಡದೆ, ಕೇಳದೆ ನೋಟಿಸ್ ಹಿಂಪಡೆದು ಪಹಣಿ ಸರಿಪಡಿಸಬೇಕು. ಇಲ್ಲದಿದ್ದರೆ ತೀವ್ರ ಹೋರಾಟ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.


Spread the love

About Laxminews 24x7

Check Also

ಮೊದಲ ಪೋಕ್ಸೋ ಕೇಸ್​​ನಲ್ಲಿ ಮುರುಘಾ ಶ್ರೀ ನಿರ್ದೋಷಿ ಎಂದು ಕೋರ್ಟ್ ತೀರ್ಪು: ಕೇಸ್​ನಿಂದ ಮೂವರು ಖುಲಾಸೆ

Spread the loveಚಿತ್ರದುರ್ಗ: ಸಾಕ್ಷ್ಯಾಧಾರಗಳ ಕೊರತೆಯ ಹಿನ್ನೆಲೆಯಲ್ಲಿ ಮೊದಲ ಪೋಕ್ಸೋ(POCSO) ಪ್ರಕರಣದಲ್ಲಿ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ನಿರ್ದೋಷಿ ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ