Breaking News

ಸರ್ಕಾರಿ ನೌಕರರಿಗೆ ನವೆಂಬರ್‌ 1ರಿಂದ ಈ ನಿಯಮ ಕಡ್ಡಾಯ

Spread the love

ಬೆಂಗಳೂರು, ಅಕ್ಟೋಬರ್ 30: ಕರ್ನಾಟಕ ಸರ್ಕಾರ ಎಲ್ಲಾ ಸರ್ಕಾರಿ ನೌಕರರು ಗುರುತಿನ ಚೀಟಿಯನ್ನು ಕೊರಳಿಗೆ ಹಾಕಿಕೊಳ್ಳಬೇಕು ಎಂದು ಆದೇಶಿಸಿದೆ. ಈಗಾಗಲೇ ‘ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ’ ಅಭಿಯಾನದಡಿ ಎಲ್ಲಾ ಸರ್ಕಾರಿ ನೌಕರರಿಗೆ ಕೆಂಪು-ಹಳದಿ ಬಣ್ಣದ ಗುರುತಿನ ಚೀಟಿ ಕೊರಳುದಾರವನ್ನು (ಟ್ಯಾಗ್) ನೀಡಲಾಗುತ್ತಿದೆ.

ಇದನ್ನು ಕಡ್ಡಾಯವಾಗಿ ಧರಿಸಬೇಕು ಎಂದು ತಿಳಿಸಲಾಗಿದೆ.

ಈ ಕುರಿತು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಬುಧವಾರ ಆದೇಶವನ್ನು ಹೊರಡಿಸಿದೆ. ನವೆಂಬರ್ 1ರಿಂದಲೇ ಜಾರಿಗೆ ಬರುವಂತೆ ಕಡ್ಡಾಯವಾಗಿ ಸರ್ಕಾರಿ ನೌಕರರು ಕೆಂಪು-ಹಳದಿ ಬಣ್ಣದ ಗುರುತಿನ ಚೀಟಿ ಧರಿಸಬೇಕು. ಇದನ್ನು ಎಲ್ಲರೂ ಕಡ್ಡಾಯವಾಗಿ ಪಾವತಿಸಬೇಕು ಎಂದು ಎಲ್ಲಾ ಇಲಾಖೆಗಳಿಗೆ ಸೂಚನೆ ನೀಡಲಾಗಿದೆ.

ಸುತ್ತೋಲೆಯ ವಿವರಗಳು: ಅಕ್ಟೋಬರ್ 28ರಂದು ಸಂದೀಪ್ ಬಿ. ಕೆ. ಸರ್ಕಾರದ ಅಧೀನ ಕಾರ್ಯದರ್ಶಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ರಾಜಕೀಯ) ಸುತ್ತೋಲೆಯೊಂದನ್ನು ಹೊರಡಿಸಿದ್ದರು. ಈ ಸುತ್ತೋಲೆ ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ ಅಭಿಯಾನದಡಿ ಎಲ್ಲಾ ಸರ್ಕಾರಿ ನೌಕರರು, ಕೆಂಪು-ಹಳದಿ ಬಣ್ಣದ ಗುರುತಿನ ಚೀಟಿಯ ಕೊರಳುದಾರವನ್ನು (ಟ್ಯಾಗ್) ಹಾಕಿಕೊಳ್ಳುವುದರ ಕುರಿತು ಎಂಬ ವಿಷಯ ಒಳಗೊಂಡಿತ್ತು.

ನಮ್ಮ ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣಗೊಳಿಸಿ 50 ವರ್ಷಗಳು ಪೂರೈಸಿರುವ ಸುಸಂದರ್ಭದಲ್ಲಿ ‘ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ’ ಅಭಿಯಾನದಡಿ ಎಲ್ಲಾ ರಾಜ್ಯ ಸರ್ಕಾರಿ ನೌಕರರು ಕೆಂಪು ಹಳದಿ ಬಣ್ಣಗಳನ್ನು ಒಳಗೊಂಡಿರುವ ಕೊರಳುದಾರ (ಟ್ಯಾಗ್) ಹೊಂದಿದ ಗುರುತಿನ ಚೀಟಿಯನ್ನು ಕಡ್ಡಾಯವಾಗಿ ಧರಿಸಬೇಕೆಂದು ದಿನಾಂಕ 16.08.2024 ರ ಸುತ್ತೋಲೆಯಲ್ಲಿ ತಿಳಿಸಲಾಗಿತ್ತು.


Spread the love

About Laxminews 24x7

Check Also

ನಾಯಕತ್ವ ಬದಲಾವಣೆ ವಿಚಾರವಾಗಿ ರಾಹುಲ್​ ಗಾಂಧಿ​ ತೀರ್ಮಾನಕ್ಕೆ ನಾನು ಬದ್ಧ: ಸಿಎಂ

Spread the loveಮೈಸೂರು: “ನಾಯಕತ್ವ ಬದಲಾವಣೆ ವಿಚಾರವಾಗಿ ರಾಹುಲ್​ ಗಾಂಧಿ ಮತ್ತು ಹೈಕಮಾಂಡ್​ ತೀರ್ಮಾನ ಮಾಡಬೇಕು. ಅವರು ಏನು ತೀರ್ಮಾನ ಮಾಡುತ್ತಾರೋ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ