ಶಿಗ್ಗಾಂವಿ: ಶಿಗ್ಗಾಂವಿ ಉಪಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಟಿಕೆಟ್ ಕೈ ತಪ್ಪಿದ್ದಕ್ಕೆ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದ ಅಜ್ಜಂಪೀರ್ ಖಾದ್ರಿ ಇಂದು ನಾಮಪತ್ರ ಹಿಂಪಡೆದಿದ್ದಾರೆ.
ಸಿಎಂ ಸಿದ್ದರಾಮಯ್ಯ ಭೇಟಿ ಬಳಿಕ ಅಜ್ಜಂಪೀರ್ ಖಾದ್ರಿ ಮನವೊಲಿಕೆ ನಡೆದಿತ್ತು.
ಈ ಹಿನ್ನೆಲೆಯಲ್ಲಿ ಇಂದು ಸಚಿವ ಜಮೀರ್ ಅಹ್ಮದ್, ಶಿವಾನಂದ ಪಾಟೀಲ್ ಜೊತೆ ಶಿಗ್ಗಾಂವಿ ತಹಶೀಲ್ದಾರ್ ಕಚೇರಿಗೆ ಆಗಮಿಸಿದ ಅಜ್ಜಂಪೀರ್ ಖಾದ್ರಿ ತಮ್ಮ ನಾಮಪತ್ರ ಹಿಂಪಡೆದಿದ್ದಾರೆ.
ನ.13ರಂದು ನಡೆಯಲಿರುವ ಉಪಚುನವಣೆ ಹಿನ್ನೆಲೆಯಲ್ಲಿ ನಾಮಪತ್ರ ವಾಪಾಸ್ ಪಡೆಯಲು ಇಂದು ಕೊನೆ ದಿನವಾಗಿತ್ತು. ಮಧ್ಯಾಹ್ನ 3ಗಂಟೆಯವರೆಗೆ ನಾಮಪತ್ರ ಹಿಂಪಡೆಯಲು ಅವಕಾಶ ನೀಡಲಾಗಿತ್ತು
Laxmi News 24×7