ಬೆಂಗಳೂರು: ವಿಜಯಪುರ ಜಿಲ್ಲೆಯಲ್ಲಿ ವಕ್ಫ್ ಬೋರ್ಡ್ ಕಾಯ್ದೆಯಿಂದ ತೊಂದರೆಗೆ ಒಳಗಾದ ರೈತರ ಅಹವಾಲು ಆಲಿಸಲು ಬಿಜೆಪಿ ತಂಡ ಭೇಟಿ ನೀಡುತ್ತಿರುವ ಬೆನ್ನಲ್ಲೇ ಸರ್ಕಾರ ಡ್ಯಾಮೇಜ್ ಕಂಟ್ರೋಲ್‌ಗೆ ಮುಂದಾಗಿದೆ.
ವಕ್ಫ್ ಆಸ್ತಿ ಎಂದು ನೋಟಿಸ್ ನೀಡಿಲ್ಲ:ಕಾಫಿ-ಟೀ ಜತೆ ಮಾಹಿತಿ ಕೊಡಲು ಸೂಚನೆ:ನಮಗೆ ಯಾವ ರೈತರ ಜಮೀನು ಬೇಡ:
ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಹೊನವಾಡ ಗ್ರಾಮದಲ್ಲಿ ವಕ್ಫ್ ಆಸ್ತಿಯೆಂದು ಯಾವ ರೈತರಿಗೂ ನೊಟೀಸ್ ಕೊಟ್ಟಿಲ್ಲ.
ಆದ್ದರಿಂದ ಯಾರೂ ಆತಂಕಕ್ಕೆ ಒಳಗಾಗಬೇಕಿಲ್ಲ. ಈ ವಿಚಾರದಲ್ಲಿ ಬಿಜೆಪಿ ಬೇಕೆಂದೇ ರಾಜಕೀಯ ಮಾಡಿ, ಇದನ್ನು ವಿವಾದ ಮಾಡುತ್ತಿದೆ ಎಂದು ಬೃಹತ್ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ, ಕಂದಾಯ ಸಚಿವ ಕೃಷ್ಣ ಬೈರೇಗೌಡ, ವಕ್ಫ್ ಖಾತೆ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಜಂಟಿ ಸುದ್ದಿಗೋಷ್ಠಿ ನಡೆಸಿ ವಾಗ್ದಾಳಿ ನಡೆಸಿದರು.
ವಕ್ಫ್ ಆಸ್ತಿ ವಿಚಾರದಲ್ಲಿ ಬಿಜೆಪಿಯವರು ಉದ್ದೇಶಪೂರ್ವಕವಾಗಿಯೇ ಜನರಲ್ಲಿ ಗಲಭೆ ಹುಟ್ಡಿಸಬೇಕು ಎಂದೇ ಹೊರಟಿದ್ದಾರೆ ಎಂದು ಆಕ್ರೋಶ ಹೊರ ಹಾಕಿದರು.
Laxmi News 24×7