Breaking News

ಕೊಲ್ಹಾಪುರ ಮಹಾಲಕ್ಷ್ಮೀ ದೇವಿಯ ದರ್ಶನ ಪಡೆದ ಶಾಸಕ ಬಾಲಚಂದ್ರ ಜಾರಕಿಹೊಳಿ

Spread the love

ಕೊಲ್ಹಾಪುರ ಮಹಾಲಕ್ಷ್ಮೀ ದೇವಿಯ ದರ್ಶನ ಪಡೆದ ಶಾಸಕ ಬಾಲಚಂದ್ರ ಜಾರಕಿಹೊಳಿ

ನಾಡಿನ ಜನತೆಗೆ ಒಳ್ಳೆಯದಾಗಲಿ ಎಂದು ದೇವರಲ್ಲಿ ಪ್ರಾರ್ಥಿಸಿಕೊಂಡ ಬಾಲಚಂದ್ರ ಜಾರಕಿಹೊಳಿ

ಗೋಕಾಕ- ದೀಪಾವಳಿ ಹಬ್ಬದ ಪ್ರಯುಕ್ತ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಶುಕ್ರವಾರ ರಾತ್ರಿ ಮಹಾರಾಷ್ಟ್ರದ ಕೊಲ್ಹಾಪುರ ಮಹಾಲಕ್ಷ್ಮಿ ದೇವಸ್ಥಾನಕ್ಕೆ ತೆರಳಿ ದೇವಿಯ ದರ್ಶನ ಪಡೆದರು.
ನಾಡಿನ ಒಳಿತಿಗಾಗಿ ಅಮ್ಮ ಮಹಾಲಕ್ಷ್ಮಿ ದೇವಿಯು ಸಕಲರಿಗೆ ಸುಖ, ನೆಮ್ಮದಿ, ಶಕ್ತಿ, ಸಮೃದ್ಧಿ ನೀಡಿ ಕರುಣಿಸಲಿ. ಬೆಳಕಿನ ಹಬ್ಬ ದೀಪಾವಳಿಯು ಎಲ್ಲರಿಗೂ ಒಳ್ಳೆಯದು ಮಾಡಲಿ ಎಂದು ಅವರು ಪ್ರಾರ್ಥಿಸಿದರು.
ಮಹಾಲಕ್ಷ್ಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

ದೇವಸ್ಥಾನ ಟ್ರಸ್ಟ್ ಕಮಿಟಿ ಪದಾಧಿಕಾರಿಗಳು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸತ್ಕರಿಸಿ ಗೌರವಿಸಿದರು.
ಪ್ರತಿ ವರ್ಷವೂ ದೀಪಾವಳಿ ಹಬ್ಬದಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಮ್ಮ ಮಿತ್ರರೊಂದಿಗೆ ಮಹಾಲಕ್ಷ್ಮಿ ದೇವಸ್ಥಾನಕ್ಕೆ ತೆರಳಿ ದರ್ಶನ ಪಡೆಯುತ್ತಾರೆ.

ಈ ಸಂದರ್ಭದಲ್ಲಿ ಗಣ್ಯ ಉದ್ಯಮಿಗಳಾದ ಜಯಶೀಲ ಶೆಟ್ಟಿ, ವಿಕ್ರಮ ಅಂಗಡಿ, ಸೈದಪ್ಪ ಗದಾಡಿ, ಬಸವರಾಜ ಕಲ್ಯಾಣಶೆಟ್ಟಿ, ರಾಜು ಅಂಡಗಿ,

ಕಂದಾಯ ಅಧಿಕಾರಿ ನಿರಂಜನ ಬನ್ನಿಶೆಟ್ಟಿ, ಮಹಾಲಕ್ಷ್ಮಿ ದೇವಸ್ಥಾನದ ಟ್ರಸ್ಟ್ ಕಮಿಟಿ ಸದಸ್ಯರು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ನಾಳೆ ದೀಪಾವಳಿ ಪಾಡ್ಯ ಪ್ರಯುಕ್ತ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಶ್ರೀ ಕ್ಷೇತ್ರ ಸವದತ್ತಿ ಯಲ್ಲಮ್ಮಗುಡ್ಡಕ್ಕೆ ತೆರಳಿ ವಿಶೇಷ ಪೂಜೆಯಲ್ಲಿ ಭಾಗಿಯಾಗಲಿದ್ದಾರೆ.


Spread the love

About Laxminews 24x7

Check Also

ರೈತನ ಮಗಳ ಸಾಧನೆ, ಪಿಯು ಸೈನ್ಸ್ ಶೇ. 97.66 ಅಂಕ: ಪುತ್ರಿ ಸಾಧನೆಗೆ ತಂದೆ-ತಾಯಿ ಹರ್ಷ

Spread the loveರೈತನ ಮಗಳ ಸಾಧನೆ, ಪಿಯು ಸೈನ್ಸ್ ಶೇ. 97.66 ಅಂಕ: ಪುತ್ರಿ ಸಾಧನೆಗೆ ತಂದೆ-ತಾಯಿ ಹರ್ಷ ಬೆಳಗಾವಿ: …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ