ಬೆಂಗಳೂರು, ನವೆಂಬರ್ 02: ಕರ್ನಾಟಕ ಲೋಕಾಯುಕ್ತ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದೆ. ಲೋಕಾಯುಕ್ತ ಸಂಸ್ಥೆಯಲ್ಲಿ ಗ್ರೂಪ್-ಸಿ ವೃಂದದ ಉಳಿಕೆ ಮೂಲ ವೃಂದದಲ್ಲಿ ಖಾಲಿ ಇರುವ ಕ್ಲರ್ಕ್-ಕಂ-ಟೈಪಿಸ್ಟ್ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲಾಗುತ್ತದೆ.
ಆಸಕ್ತರು ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬೇಕಿದೆ. ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ 30/10/2024 ಮತ್ತು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 29/11/2024.
ಗ್ರೂಪ್-ಸಿ ವೃಂದದ ಉಳಿಕೆ ಮೂಲ ವೃಂದದಲ್ಲಿ ಖಾಲಿಯಿರುವ 16 ಕ್ಲರ್ಕ್-ಕಂ-ಟೈಪಿಸ್ಟ್ ಹುದ್ದೆಗಳನ್ನು ಕರ್ನಾಟಕ ಲೋಕಾಯುಕ್ತ (ವೃಂದ, ನೇಮಕಾತಿ ಮತ್ತು ಸಿಬ್ಬಂದಿ ಹಾಗೂ ಅಧಿಕಾರಿಗಳ ಸೇವಾ ಷರತ್ತು) ನಿಯಮಗಳು 1988ರ ಅನುಬಂಧ- ಎ ಮತ್ತು ಕೆಸಿಎಸ್ (ಸಾಮಾನ್ಯ ನೇಮಕಾತಿ) ನಿಯಮಗಳು 1977 ಹಾಗೂ ಅಧಿಸೂಚನೆ ದಿನಾಂಕ 14-08-2006 ರನ್ವಯ ಅರ್ಹತೆ ಹೊಂದಿರುವ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಕೆ ಮಾಡುವ ಅಭ್ಯರ್ಥಿಗಳಿಗೆ ಕನಿಷ್ಠ ವಯೋಮಿತಿ 18 ವರ್ಷಗಳು. ಅರ್ಜಿ ಸಲ್ಲಿಕೆ ಮಾಡಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಎಲ್ಲಾ ಪ್ರವರ್ಗದ ಅಭ್ಯರ್ಥಿಗಳಿಗೆ 18 ವರ್ಷ ತುಂಬಿರಬೇಕು ಹಾಗೂ ಗರಿಷ್ಠ ವಯೋಮಿತಿ ಮೀರಿರಬಾರದು. ಗರಿಷ್ಠ ವಯೋಮಿತಿ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಪ್ರವರ್ಗ-1 43 ವರ್ಷಗಳು. ಪ್ರವರ್ಗ 2ಎ/ 2ಬಿ/ 3ಎ/ 3ಬಿ 41 ವರ್ಷಗಳು. ಸಾಮಾನ್ಯ ಅರ್ಹತೆ 38 ವರ್ಷಗಳು.
ವೇತನ, ಇತರ ಮಾಹಿತಿಗಳು: ಕ್ಲರ್ಕ್-ಕಂ-ಟೈಪಿಸ್ಟ್ ಒಟ್ಟು ಹುದ್ದೆಗಳು 16. ಆಯ್ಕೆಯಾದ ಅಭ್ಯರ್ಥಿಗಳಿಗೆ ವೇತನ 34100-800-35700-900-39300-1000-43300-1125-47800-1250-52800-1375-58300-1500-64300-1650-67600 ರೂ. ನಿಗದಿ ಮಾಡಲಾಗಿದೆ.
ಅರ್ಜಿ ಸಲ್ಲಿಕೆ ಮಾಡುವ ಅಭ್ಯರ್ಥಿಗಳು ಪದವಿ ಪೂರ್ವ ಶಿಕ್ಷಣ ಪರೀಕ್ಷೆ ಉತ್ತೀರ್ಣ ಅಥವಾ ತತ್ಸಮಾನ ವಿದ್ಯಾರ್ಹತೆ ನಿಗದಿ ಮಾಡಲಾಗಿದೆ. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಕನ್ನಡ ಮತ್ತು ಆಂಗ್ಲ ಕಿರಿಯ ದರ್ಜೆ ಬೆರಳಚ್ಚು ಪರೀಕ್ಷೆ ಉತ್ತೀರ್ಣ ಅಥವಾ ತತ್ಸಮಾನ (ಮೂಲ ಅಂಕಪಟ್ಟಿಯನ್ನು ಅರ್ಹತಾ ಪರೀಕ್ಷೆಗೆ ಕರೆ ಬಂದಾಗ ಪರಿಶೀಲನೆಗಾಗಿ ಹಾಜರುಪಡಿಸುವುದು).
Laxmi News 24×7