ಬೆಂಗಳೂರು, ನವೆಂಬರ್ 02: ರಾಜ್ಯ ರಾಜಕಾರಣದಲ್ಲಿ ಆರೋಪ ಪ್ರತ್ಯಾರೋಪಗಳು ಮುಂದುವರಿದ ಭಾಗವಾಗಿ ಉಭಯ ಪಕ್ಷಗಳ ನಾಯಕರ ಚರ್ಚೆಗೆ ಆಹ್ವಾನ ನೀಡುತ್ತಿದ್ದಾರೆ. ಭ್ರಷ್ಟಾಚಾರ, ಹೇಳಿಕೆಗಳು, ಸುಳ್ಳು ಆರೋಪ ಬಗ್ಗೆ ಕಾಂಗ್ರೆಸ್ ಸರ್ಕಾರವನ್ನು ಟೀಕಿಸಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ಕೊಟ್ಟಿದ್ದಾರೆ.
ನಮ್ಮ ಚಿಂತೆ ಬಿಡಿ, ಬಿಜೆಪಿ ನಾಯಕರ ಬಹಿರಂಗ ಹೇಳಿಕೆಗಳಿಗೆ ಮೊದಲು ಪ್ರತಿಕ್ರಿಯಿಸಿ ಎಂದಿದ್ದಾರೆ.
ಪ್ರಧಾನಿ ಮೋದಿ ವಿರುದ್ಧ ಮಾತನಾಡಿದ್ದಕ್ಕೆ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿವೈ ವಿಜಯೇಂದ್ರ ಅವರು ಕಾಲೆಳೆದಿದ್ದರು. ಇದೀಗ ಅವರ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿದ್ದಾರೆ. ಪ್ರಧಾನಿ ಬದಲಿಗೆ ವಿಜಯೇಂದ್ರ ಅವರೇ ತಾವು ಬಹಿರಂಗ ಚರ್ಚೆಗೆ ಸಿದ್ಧ ಎಂದು ಹಾಕಿರುವ ಸವಾಲನ್ನು ಗಮನಿಸಿದೆ. ನನ್ನ ಜೊತೆ ಚರ್ಚೆ ನಡೆಸುವ ಮೊದಲು ನಿಮ್ಮದೇ ಪಕ್ಷದ ನಾಯಕರಾಗಿರುವ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ರಮೇಶ್ ಜಾರಕಿಹೊಳಿ ಅವರ ಜೊತೆ ಒಂದು ಸುತ್ತು ಚರ್ಚೆ ಮಾಡಿಕೊಂಡು ಬನ್ನಿ ಎಂದು ಟಾಂಗ್ ಕೊಟ್ಟಿದ್ದಾರೆ.
Laxmi News 24×7