ಬೆಂಗಳೂರು: ವಿಧಾನಸೌಧದ ಆವರಣದಲ್ಲಿ ಭುವನೇಶ್ವರಿ ಪ್ರತಿಮೆಯನ್ನು ಸದ್ಯದಲ್ಲಿ ಸ್ಥಾಪಿಸುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಕರ್ನಾಟಕ ರಾಜ್ಯೋತ್ಸವ ಸಮಿತಿ ವತಿಯಿಂದ ಮೈಸೂರು ಬ್ಯಾಂಕ್ ವೃತ್ತದಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ‘ಕನ್ನಡ ರಾಜ್ಯೋತ್ಸವ’ ಕಾರ್ಯಕ್ರಮದಲ್ಲಿ ಮಾತನಾಡಿದರು.
1983ರಲ್ಲಿ ಕನ್ನಡ ಕಾವಲು ಸಮಿತಿ ಅಧ್ಯನಾಗಿದ್ದೆ. ಕನ್ನಡವನ್ನು ಕಾಯಲು ಸಮಿತಿ ಬೇಕೆನ್ನುವ ಪರಿಸ್ಥಿತಿ ಕರ್ನಾಟಕದಲ್ಲಿ ಉಂಟಾಗಿದೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರ ಹೆಸರಿನಲ್ಲಿ ಈ ಸಮಿತಿ ಕಾರ್ಯನಿರ್ವಹಿಸುತ್ತಿದೆ. ಭಾಷೆ, ಸಂಸತಿ ಬಗ್ಗೆ ಅಭಿಮಾನ ಇರಬೇಕು. ಬೇರೆ ಭಾಷೆ ಕಲಿತರೂ ತಾಯಿ ಭಾಷೆ ಕನ್ನಡವನ್ನು ಮರೆಯಬಾರದು. ಕನ್ನಡಕ್ಕೆ ಸೂಕ್ತ ಗೌರವ ಸಿಗುವ ಕೆಲಸವನ್ನು ನಾವೆಲ್ಲರೂ ಮಾಡಬೇಕಿದೆ. ಕನ್ನಡೇತರರು ಕನ್ನಡವನ್ನು ಕಲಿಯುವ ವಾತಾವರಣ ನಿರ್ಮಿಸಿದಾಗ ಮಾತ್ರ ನಮ್ಮ ಭಾಷೆ ಎತ್ತರಕ್ಕೆ ಬೆಳೆಯಲು ಸಾಧ್ಯವಾಗಲಿದೆ. ನಾನು ಅಧಿಕಾರದಲ್ಲಿರುವಾಗ ಕನ್ನಡಕ್ಕೆ ಚ್ಯುತಿಯಾಗಲು ಬಿಡುವುದಿಲ್ಲ ಎಂದರು.