Breaking News

ಮಂಗನ ದಾಳಿಯಿಂದ 20ಕ್ಕೂ ಹೆಚ್ಚು ಜನ ಗಾಯಗೊಂಡು ಆಸ್ಪತ್ರೆಗೆ ದಾಖಲ

Spread the love

ರಾಮದುರ್ಗ: ಮಂಗನ ದಾಳಿಯಿಂದ 20ಕ್ಕೂ ಹೆಚ್ಚು ಜನ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಪಟ್ಟಣದಲ್ಲಿ ನಡೆದಿದೆ.

ಶನಿವಾರ ಮತ್ತು ಭಾನುವಾರ ಪಟ್ಟಣದ ನೇಕಾರ ಪೇಟೆ, ಸಾಯಿ ನಗರದಲ್ಲಿ ಮಂಗನ ಹಾವಳಿಗೆ ಜನರು ತತ್ತರಿಸಿ ಹೋಗಿದ್ದಾರೆ. ಒಂಟಿಯಾಗಿ ಸುತ್ತಾಡುವ ಜನರನ್ನು ಗುರಿಯಾಗಿಸಿಕೊಂಡು ಮಂಗ ದಾಳಿ ಮಾಡುತ್ತಿದೆ.

ಮಂಗನಿಂದ ಕಚ್ಚಿಸಿಕೊಂಡವರು ಈ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

ರಾಮದುರ್ಗ ಪೊಲೀಸರು ಕಾರ್ಯಾಚರಣೆ ನಡೆಸಿದರೂ ಮಂಗ ಸೆರೆ ಸಿಕ್ಕಿಲ್ಲ. ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ತಿಳಿಸಿದ್ದರೂ ಕ್ರಮಕ್ಕೆ ಮುಂದಾಗುತ್ತಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ಜನರ ಮೇಲೆ ದಾಳಿ ಮಾಡುತ್ತಿರುವ ಮಂಗನಿಗೆ ಹುಚ್ಚು ಹಿಡಿದಿರುವ ಶಂಕೆಯಿದೆ. ಅರಣ್ಯ ಇಲಾಖೆ ಸಿಬ್ಬಂದಿ ಕೂಡಲೇ ಜನರ ಮೇಲೆ ದಾಳಿ ಮಾಡುತ್ತಿರುವ ಮಂಗನನ್ನು ಸೆರೆ ಹಿಡಿಯಬೇಕು ಎಂದು ಸಾರ್ವಜನಿಕರು ಆಗ್ರಹಿಸುತ್ತಿದ್ದಾರೆ.


Spread the love

About Laxminews 24x7

Check Also

ಚಿಕ್ಕೋಡಿಯಲ್ಲಿ ಸರಣಿ ಕಳ್ಳತನ, ಕಾ‌ರ್ ಹಾಗೂ ಮನೆಗಳ್ಳತನ ಮಾಡಿ ಕಳ್ಳರು ಪರಾರಿ

Spread the love ಚಿಕ್ಕೋಡಿಯಲ್ಲಿ ಸರಣಿ ಕಳ್ಳತನ, ಕಾ‌ರ್ ಹಾಗೂ ಮನೆಗಳ್ಳತನ ಮಾಡಿ ಕಳ್ಳರು ಪರಾರಿ ಚಿಕ್ಕೋಡಿ: ಒಂದು ಮನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ