Breaking News

ನವೆಂಬರ್ 4, 5 ರಂದುಸಿಎಂ, ಡಿಸಿಎಂ ಭರ್ಜರಿ ಪ್ರಚಾರ

Spread the love

ಬೆಂಗಳೂರು: ಉಪ ಚುನಾವಣೆ ನಡೆಯಲಿರುವ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಸೋಮವಾರದಿಂದ ಪ್ರಚಾರ ಕೈಗೊಂಡಿದ್ದಾರೆ.

ನವೆಂಬರ್ 4, 5 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಿಗ್ಗಾವಿ ಕ್ಷೇತ್ರದಲ್ಲಿ ಪ್ರಚಾರ ನಡೆಸಲಿದ್ದಾರೆ.

ಬೆಂಗಳೂರಿನಿಂದ ಸೋಮವಾರ ಬೆಳಗ್ಗೆ 9 ಗಂಟೆಗೆ ಹೊರಟು ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಅವರು 10 50ಕ್ಕೆ ಶಿಗ್ಗಾವಿ ತಲುಪಲಿದ್ದಾರೆ. ಹುಲಗೂರಿನಲ್ಲಿ ನಡೆಯಲಿರುವ ಪ್ರಚಾರ ಸಭೆಯಲ್ಲಿ ಸಿಎಂ ಭಾಗವಹಿಸಲಿದ್ದಾರೆ.

ಮಧ್ಯಾಹ್ನ 3 ಗಂಟೆಗೆ ಹುರುಳಿಕುಪ್ಪಿ, ಸಂಜೆ 6 ಗಂಟೆಗೆ ಬಂಕಾಪುರ ಪಟ್ಟಣದಲ್ಲಿ ಮುಖ್ಯಮಂತ್ರಿಗಳ ಚುನಾವಣಾ ಪ್ರಚಾರ ಸಭೆ ನಿಗದಿಯಾಗಿದೆ. ರಾತ್ರಿ ಹುಬ್ಬಳ್ಳಿಯಲ್ಲಿ ವಾಸ್ತವ್ಯ ಹೂಡಲಿರುವ ಸಿಎಂ ಮಂಗಳವಾರ ಬೆಳಿಗ್ಗೆ 10:45 ಕ್ಕೆ ಶಿಗ್ಗಾವಿ ಕ್ಷೇತ್ರದ ಚಂದಾಪುರದಲ್ಲಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಹಿರೇಬೆಂಡೆಗೆರೆ, ಸಂಜೆ 6 ಗಂಟೆಗೆ ಚಿಲ್ಲೂರುಬಡ್ನಿಯಲ್ಲಿ ಪ್ರಚಾರ ನಡೆಸಲಿದ್ದಾರೆ. ನಂತರ ಹುಬ್ಬಳ್ಳಿಯಿಂದ ಬೆಂಗಳೂರಿಗೆ ವಿಮಾನದ ಮೂಲಕ ವಾಪಸ್ ಅಗಲಿದ್ದಾರೆ.

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೋಮವಾರ ದಿನವಿಡಿ ಚನ್ನಪಟ್ಟಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ. ಯೋಗೇಶ್ವರ್ ಪರ ಪ್ರಚಾರ ನಡೆಸಲಿದ್ದಾರೆ. ಹೊಂಗನೂರು, ವಿರುಪಾಕ್ಷಿಪುರ, ಕೋಡಂಬಳ್ಳಿ, ಅಕ್ಕೂರು, ಚನ್ನಪಟ್ಟಣ ಟೌನ್, ಮಂಗಳವಾರ ಪೇಟೆಯಲ್ಲಿ ಅವರು ಪ್ರಚಾರ ಕೈಗೊಂಡಿದ್ದಾರೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ