Breaking News

ವಕ್ಫ್ ವಿರುದ್ಧ ಹಲವು ಮಠಾಧೀಶರ ನೇತೃತ್ವದಲ್ಲಿ ಹೋರಾಟ

Spread the love

ವಿಜಯಪುರ: ವಕ್ಫ್ ನಿಂದ ಭೂ ಕಬಳಿಕೆ ವಿರೋಧಿಸಿ ಭಾರತೀಯ ಕಿಸಾನ್ ಸಂಘದ ವತಿಯಿಂದ ವಿಜಯಪುರ ಜಿಲ್ಲೆಯ ಮಠಾಧೀಶರ ನೇತೃತ್ವದಲ್ಲಿ ಹೋರಾಟ ನಡೆಯುತ್ತಿದೆ.

ನಗರದ ಶ್ರೀ ಸಿದ್ಧೇಶ್ವರ ದೇವಸ್ಥಾನದ ಆವರಣದಲ್ಲಿ ಹೋರಾಟ ಮಾಡಲಾಗುತ್ತಿದೆ. ಕನ್ನೇರಿ ಮಠದ ಶ್ರೀ ಅದೃಶ್ಯ ಕಾಡಸಿದ್ದೇಶ್ವರ ಮಹಾಸ್ವಾಮೀಜಿ, ಕೂಡಲ ಸಂಗಮ ಪಂಚಮಸಾಲಿ ಸಮಾಜದ ಜಗದ್ಗುರು ಶ್ರೀ ಬಸವಜಯ ಮೃತ್ಯುಂಜಯ ಮಹಾಸ್ವಾಮೀಜಿ, ಜ್ಞಾನಯೋಗಾಶ್ರಮದ ಶ್ರೀ ಬಸವಲಿಂಗ ಮಹಾಸ್ವಾಮೀಜಿ, ಪಂಚಮಸಾಲಿ ಜಗದ್ಗುರು ಡಾ.

ಮಹಾದೇವ ಶಿವಾಚಾರ್ಯರು, ಯರನಾಳ ವಿರಕ್ತಮಠದ ಶ್ರೀ ಗುರು ಸಂಗನಬಸವ ಶಿವಾಚಾರ್ಯರು, ಬುರಾಣಪೂರದ ಮಾತೋಶ್ರೀ ಯೋಗೇಶ್ವರಿ ಮಾತಾಜಿ ಹಲವು ಸ್ವಾಮೀಜಿಗಳು ವೇದಿಕೆಯಲ್ಲಿದ್ದಾರೆ.

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಸಂಸದರಾದ ರಮೇಶ ಜಿಗಜಿಣಗಿ, ವಿಶ್ವೇಶ್ವರ ಹೆಗಡೆ ಕಾಗೇರಿ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸೇರಿದಂತೆ ಅನೇಕ ಮುಖಂಡರು ವೇದಿಕೆಯ ಕೆಳಗಡೆ ಕುಳಿತಿದ್ದಾರೆ.


Spread the love

About Laxminews 24x7

Check Also

ಮೈಸೂರಿನಿಂದ ಉದಯಪುರಕ್ಕೆ ತೆರಳುತ್ತಿದ್ದ ರೈಲಿನ ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಯಾಗಿತ್ತು.

Spread the loveರಾಮನಗರ: ಬೊಂಬೆನಗರಿ ಚನ್ನಪಟ್ಟಣದ ಬಳಿ ಚಲಿಸುತ್ತಿದ್ದ ರೈಲಿನ ಇಂಜಿನ್​​ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಇಂದು (ಗುರುವಾರ) ನಡೆದಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ