Breaking News

ಅಪ್ರಾಪ್ತೆಯೊಂದಿಗೆ ಅನುಚಿತ ವರ್ತನೆ: ಮುಖ್ಯ ಪೇದೆ ವಿರುದ್ದ ಪೋಕ್ಸೋ ಕೇಸ್

Spread the love

ಹುಬ್ಬಳ್ಳಿ: ಅಪ್ರಾಪ್ತೆಯೊಂದಿಗೆ ಅನುಚಿತ ವರ್ತನೆ ತೋರಿದ ಆರೋಪದ‌ ಮೇರೆಗೆ ಮುಖ್ಯ ಪೇದೆಯೊಬ್ಬರ ವಿರುದ್ದ ಪೋಕ್ಸೋ ಪ್ರಕರಣ ದಾಖಲಾಗಿದೆ.

ಕೇಶ್ವಾಪುರ ಠಾಣೆ ವ್ಯಾಪ್ತಿಯ ಶಬರಿ ನಗರದ ಎಂ.ಎ. ಖಾದಿರನವರ ಎಂಬಾತನ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ. ಈತನು ರವಿವಾರ ಮಧ್ಯಾಹ್ನ 9 ವರ್ಷದ ಬಾಲಕಿ ಪುಸಲಾಯಿಸಿ ಮನೆಗೆ ಕರೆಯಿಸಿ ಅನುಚಿತ ವರ್ತನೆ ತೋರಿದ್ದಾನೆ.

 

ದಕ್ಷಿಣ ಸಂಚಾರ ಪೊಲೀಸ್ ಠಾಣೆಯ ಹೆಡ್ ಕಾನ್ಸಟೇಬಲ್ ಆಗಿರುವ ಈತನು ಮೂರು ಮಕ್ಕಳ ತಂದೆಯಾಗಿದ್ದರೂ ಇಂತಹ ದುವರ್ತನೆ ತೋರಿದ್ದಾನೆ. ಬಾಲಕಿಯ ಪೋಷಕರು ಅನುಚಿತ ವರ್ತನೆ ತೋರಿರುವ ಎಚ್‌ಸಿಗೆ ಧರ್ಮದೇಟು ನೀಡಿದ್ದಾರೆ. ಅಲ್ಲದೇ ಕೇಶ್ವಾಪುರ ಪೊಲೀಸರಿಗೆ ಅವನನ್ನು ಒಪ್ಪಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿ ಕೊಂಡಿದ್ದಾರೆ‌.

ಈ ಘಟನೆಗೆ ಸಂಬಂಧಿಸಿ ಹು-ಧಾ. ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಸುದ್ದಿಗಾರರೊಂದಿಗೆ ಮಾತನಾಡಿ, ಕೇಶ್ವಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವ್ಯಕ್ತಿಯೋರ್ವನ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ. ಈಗಾಗಲೇ ಆತನನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.


Spread the love

About Laxminews 24x7

Check Also

ಮೊದಲ ಪೋಕ್ಸೋ ಕೇಸ್​​ನಲ್ಲಿ ಮುರುಘಾ ಶ್ರೀ ನಿರ್ದೋಷಿ ಎಂದು ಕೋರ್ಟ್ ತೀರ್ಪು: ಕೇಸ್​ನಿಂದ ಮೂವರು ಖುಲಾಸೆ

Spread the loveಚಿತ್ರದುರ್ಗ: ಸಾಕ್ಷ್ಯಾಧಾರಗಳ ಕೊರತೆಯ ಹಿನ್ನೆಲೆಯಲ್ಲಿ ಮೊದಲ ಪೋಕ್ಸೋ(POCSO) ಪ್ರಕರಣದಲ್ಲಿ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ನಿರ್ದೋಷಿ ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ