Breaking News

ಗ್ಯಾಸ್ ಸಿಲಿಂಡ‌ರ್ ಲೀಕ್ ಪಾರ್ಟಿ ವೇಳೆ ಸಿಲಿಂಡ‌ರ್ ಸ್ಫೋ*ಟ: ಅಪಾರ ಹಾನಿ

Spread the love

ಡುಪಿ: ಪಾರ್ಟಿ ಮಾಡುತ್ತಿದ್ದ ವೇಳೆ ಗ್ಯಾಸ್ ಸಿಲಿಂಡ‌ರ್ ಸ್ಫೋಟಗೊಂಡ ಪರಿಣಾಮ ಅಪಾರ ಪ್ರಮಾಣದ ಹಾನಿ ಉಂಟಾದ ಘಟನೆ ಉಡುಪಿ ಕಲ್ಸಂಕ ಸಮೀಪದ ಬಡಗುಪೇಟೆ ರಸ್ತೆಯ ಅಪಾರ್ಟ್ ಮೆಂಟ್ ವೊಂದರಲ್ಲಿ ಸೋಮವಾರ(ನ4) ರಾತ್ರಿ ನಡೆದಿದೆ.

ಗ್ಯಾಸ್ ಸಿಲಿಂಡ‌ರ್ ಲೀಕ್ ಆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.

ಮೂರು ಅಂತಸ್ತಿನ ಅಪಾರ್ಟ್ ಮೆಂಟ್ ನ ಮೂರನೇ ಮಹಡಿಯಲ್ಲಿ ಪಶ್ಚಿಮ ಬಂಗಾಳ ಮೂಲದ ಕಾರ್ಮಿಕರು ಪಾರ್ಟಿ ಮಾಡುತ್ತಿದ್ದರು. ಈ ಸಂದರ್ಭದಲ್ಲಿ ಗ್ಯಾಸ್‌ ಸಿಲಿಂಡರ್‌ ಲೀಕ್ ಆಗಿ ಏಕಾಏಕಿ ಬೆಂಕಿ ಹೊತ್ತಿಕೊಂಡಿದೆ. ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಕೊಠಡಿಯಲ್ಲಿ ಪಾರ್ಟಿ ಮಾಡುತ್ತಿದ್ದವರು ಹೊರಗೆ ಓಡಿ ಬಂದು ಪ್ರಾಣ ಉಳಿಸಿಕೊಂಡಿದ್ದಾರೆ. ಬಳಿಕ ಅಗ್ನಿ ಶಾಮಕ ಇಲಾಖೆಗೆ ಮಾಹಿತಿ ನೀಡಿದ್ದಾರೆ. ತತ್ ಕ್ಷಣವೇ ಸ್ಥಳಕ್ಕೆ ಬಂದ ಅಗ್ನಿಶಾಮಕ ಇಲಾಖೆಯ ಸಿಬಂದಿ ಕಾರ್ಯಾಚರಣೆ ನಡೆಸಿ ಸಂಭವನೀಯ ಅನಾಹುತವೊಂದನ್ನು ತಪ್ಪಿಸಿದ್ದಾರೆ.

ಸಿಲಿಂಡ‌ರ್ ಸ್ಪೋಟಗೊಂಡ ಪರಿಣಾಮ ಮನೆಯಲ್ಲಿದ್ದ ಸೊತ್ತುಗಳು ಸುಟ್ಟು ಕರಕಲಾಗಿದ್ದು, ಅಪಾರ ಪ್ರಮಾಣದ ಹಾನಿಯುಂಟಾಗಿದೆ ಎಂದು ತಿಳಿದುಬಂದಿದೆ.


Spread the love

About Laxminews 24x7

Check Also

ಯುಗಾದಿ, ರಂಜಾನ್ – KSRTCಯಿಂದ ಹೆಚ್ಚುವರಿ ಬಸ್ ಸೇವೆ, ವಿಶೇಷ ರಿಯಾಯಿತಿ ಘೋಷಣೆ

Spread the loveಬೆಂಗಳೂರು: ಯಗಾದಿ  ಹಾಗೂ ರಂಜಾನ್  ಹಬ್ಬ ಒಟ್ಟಿಗೆ ಬಂದ ಹಿನ್ನೆಲೆ ಕೆಎಸ್‌ಆರ್‌ಟಿಸಿ  ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಮಾಡಿದ್ದು, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ