Breaking News

ಸಿ.ಪಿ ಯೋಗೇಶ್ವರ್ ವಿರುದ್ಧ ಮಗಳು ನಿಶಾ ಈ ಕಾರಣಕ್ಕೆ ಮಾತನಾಡುವಂತಿಲ್ಲ, ಯಾಕೆ ?

Spread the love

ರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಕಣ ರಂಗೇರಿದ್ದು, ಕೊನೆಯ ಹಂತದ ಹಣಾಹಣೆಗೆ ತಲುಪಿದೆ. ಈ ನಡುವೆ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಮಹತ್ವದ ರಾಜಕೀಯ ಬೆಳವಣಿಗೆಗಳು ನಡೆಯುತ್ತಿವೆ. ವಿರೋಧ ಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ವಕ್ಫ್‌ ಬೋರ್ಡ್‌ ವಿವಾದವನ್ನೇ ಪ್ರಧಾನ ಅಸ್ತ್ರವನ್ನಾಗಿಸಿಕೊಳ್ಳುತ್ತಿದ್ದು, ಈ ನಡುವೆ ಚನ್ನಪಟ್ಟಣ ವಿಧಾನಸಭೆ ಕಣದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ ನಡೆದಿದ್ದು, ಸಿ.ಪಿ ಯೋಗೇಶ್ವರ್‌ ಅವರ ಪುತ್ರಿ ನಿಶಾ ಅವರನ್ನು ಕಟ್ಟಿ ಹಾಕುವ ಪ್ರಯತ್ನ ಮಾಡಲಾಗಿದೆ.

 

ಸಿ.ಪಿ ಯೋಗೇಶ್ವರ್ ಅವರು ಬಿಜೆಪಿ ತೊರೆದು ಕಾಂಗ್ರೆಸ್‌ ಸೇರ್ಪಡೆಯಾದಾಗಿನಿಂದಲೂ ಅವರ ಮಗಳಾದ ನಿಶಾ ಅವರು ಒಂದಿಲ್ಲೊಂದು ಆರೋಪಗಳನ್ನು ಮಾಡುತ್ತಿದ್ದರು. ನಿಶಾ ಅವರು ಸಿ.ಪಿ ಯೋಗೇಶ್ವರ್ ಅವರ ಬಗ್ಗೆ ಮಾತನಾಡಿದ್ದ ವಿಡಿಯೋಗಳು ಸೋಷಿಯಲ್‌ ಮೀಡಿಯಾಗಳಲ್ಲಿ ಭಾರೀ ವೈರಲ್ ಆಗಿ ಚರ್ಚೆಗೂ ಗ್ರಾಸವಾಗಿದ್ದು ಇದೆ. ಇನ್ನು ಇದೇ 13ಕ್ಕೆ ಚನ್ನಪಟ್ಟಣ, ಶಿಗ್ಗಾಂವಿ ಹಾಗೂ ಸಂಡೂರು ವಿಧಾನಸಭಾ ಕ್ಷೇತ್ರಗಳಲ್ಲಿ ಉಪ ಚುನಾವಣೆ ನಡೆಯಲಿದೆ.

ಈ ಮೂರು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕೊನೆಯ ಅಂತದ ಸರ್ಕಸ್‌ ಅನ್ನು ರಾಜಕೀಯ ಪಕ್ಷಗಳು ಹಾಗೂ ಚುನಾವಣೆ ಕಣದಲ್ಲಿ ಇರುವ ಅಭ್ಯರ್ಥಿಗಳು ಮಾಡುತ್ತಿದ್ದಾರೆ. ಈ ನಡುವೆ ಸಿ.ಪಿ. ಯೋಗೇಶ್ವರ್ ವಿರುದ್ಧ ಅವರ ಮಗಳು ನಿಶಾ ಅವರು ಮಾತನಾಡುವಂತಿಲ್ಲ ಎಂದು ಸಿ.ಪಿ ಯೋಗೇಶ್ವರ್‌ ಅವರ 2ನೇ ಹೆಂಡತಿ ಪಿ.ವಿ. ಶೀಲಾ ಅವರು ಕೋರ್ಟ್‌ನಿಂದ ತಡೆಯಾಜ್ಞೆ ತಂದಿದ್ದಾರೆ.


Spread the love

About Laxminews 24x7

Check Also

ನಾಯಕತ್ವ ಬದಲಾವಣೆ ವಿಚಾರವಾಗಿ ರಾಹುಲ್​ ಗಾಂಧಿ​ ತೀರ್ಮಾನಕ್ಕೆ ನಾನು ಬದ್ಧ: ಸಿಎಂ

Spread the loveಮೈಸೂರು: “ನಾಯಕತ್ವ ಬದಲಾವಣೆ ವಿಚಾರವಾಗಿ ರಾಹುಲ್​ ಗಾಂಧಿ ಮತ್ತು ಹೈಕಮಾಂಡ್​ ತೀರ್ಮಾನ ಮಾಡಬೇಕು. ಅವರು ಏನು ತೀರ್ಮಾನ ಮಾಡುತ್ತಾರೋ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ