Breaking News

ಕಬ್ಬಿನ ದರ ಘೋಷಿಸಿ ಕಾರ್ಖಾನೆ ಪ್ರಾರಂಭಿಸಿ’

Spread the love

ಕಾಗವಾಡ: ರಾಜ್ಯ ಸರ್ಕಾರ ಕಬ್ಬಿನ ಕಾರ್ಖಾನೆಗಳನ್ನು ನ.8ರ ನಂತರ ಪ್ರಾರಂಭಿಸಲು ಆದೇಶ ನೀಡಿದ್ದು, ತಾಲ್ಲೂಕಿನ ಕೆಲ ಕಾರ್ಖಾನೆಗಳು ಈಗಾಗಲೇ ಪ್ರಾರಂಭಗೊಂಡಿವೆ‌. ಕಬ್ಬಿನ ದರ ಘೋಷಣೆ ಮಾಡದೇ ಕಾರ್ಖಾನೆಗಳು ಪ್ರಾರಂಭಿಸಿಸಬಾರದೆಂದು ಆಗ್ರಹಿಸಿ ತಾಲ್ಲೂಕಿನ ಕಬ್ಬು ಬೆಳೆಗಾರ ರೈತರು ಮಂಗಳವಾರ ತಹಶೀಲ್ದಾರ್ ರಾಜೇಶ ಬುರ್ಲಿ ಮತ್ತು ಕಾಗವಾಡ ಪಿಎಸ್‌ಐ ಜಿ.ಜಿ ಬಿರಾದರ ಅವರಿಗೆ ಮನವಿ ಸಲ್ಲಿಸಿದರು.

 

ರೈತ ಮುಖಂಡ ಸುರೇಶ ಚೌಗುಲೆ ಮಾತನಾಡಿ, ಈ ಮೊದಲು ರಾಜ್ಯ ಸರ್ಕಾರ ನ.15 ರ ನಂತರ ಕಾರ್ಖಾನೆಗಳನ್ನು ಪ್ರಾರಂಭಿಸಲು ಸೂಚಿಸಿತ್ತು. ಆದರೆ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ನಡೆದ ರೈತರ ಮತ್ತು ಕಾರ್ಖಾನೆ ಮಾಲೀಕರ ಸಭೆಯಲ್ಲಿ ನ. 8ರ ನಂತರ ಕಾರ್ಖಾನೆಗಳನ್ನು ಪ್ರಾರಂಭಿಸಲು ಸೂಚಿಸಿದೆ. ಆದರೂ ಕಾರ್ಖಾನೆಗಳು ಆದೇಶ ಉಲ್ಲಂಘಿಸಿ ಕಬ್ಬು ಕಟಾವು ಪ್ರಾರಂಭಿಸಿವೆ. ತರಾತುರಿಯಲ್ಲಿ ಕಬ್ಬಿನ ದರ ನಿಗದಿ ಮಾಡದೇ ಕಾರ್ಖಾನೆ ಪ್ರಾರಂಭಿಸಿರುವುದು ಸರಿಯಲ್ಲ’ ಎಂದರು.


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ