Breaking News

ಯಾವುದೇ ರೈತರನ್ನು ಒಕ್ಕಲೆಬ್ಬಿಸುವುದಿಲ್ಲ: ಡಿಕೆ ಶಿವಕುಮಾರ್

Spread the love

ಹುಬ್ಬಳ್ಳಿ: ವಕ್ಫ್ ವಿವಾದ ಬಿಜೆಪಿಯ ಸೃಷ್ಟಿ. ನಮ್ಮ ಸರ್ಕಾರವು ರೈತರನ್ನು ರಕ್ಷಿಸಲು ಬದ್ಧವಾಗಿದ್ದು, ಯಾರನ್ನೂ ಒಕ್ಕಲೆಬ್ಬಿಸುವುದಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಗುರುವಾರ (ನ.07) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಕ್ಫ್ ತಿದ್ದುಪಡಿ ಮಸೂದೆ ಸಂಬಂಧ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ಅಧ್ಯಕ್ಷರ ಭೇಟಿ ಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ ಈ ವಿವಾದ ಸೃಷ್ಟಿಸಿದೆ.

ರಾಜ್ಯದ ಆಸ್ತಿ ರಾಜ್ಯಕ್ಕೆ ಸಂಬಂಧಿಸಿದ ವಿಚಾರ. ವಕ್ಫ್ ಆಸ್ತಿ ವಿಚಾರವಾಗಿ ಧಾರವಾಡ ಸೇರಿದಂತೆ ಬೇರೆ ಜಿಲ್ಲೆಗಳಲ್ಲಿ 2019ರಿಂದ ಮೊದಲು ನೋಟೀಸ್ ಕೊಟ್ಟಿದ್ದು ಬಿಜೆಪಿ. ಈಗ ನಮ್ಮ ಮೇಲೆ ಆರೋಪ ಮಾಡುತ್ತಿದ್ದಾರೆ ಎಂದರು.

ನಾವು ಆಗಿರುವ ತಪ್ಪುಗಳನ್ನು ಸರಿಪಡಿಸಿ ರೈತರನ್ನು ರಕ್ಷಣೆ ಮಾಡುತ್ತೇವೆ. ಈ ವಿಚಾರವಾಗಿ ನಮ್ಮ ಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರು ಸ್ಪಷ್ಟನೆ ನೀಡಿದ್ದಾರೆ. ಜೆಪಿಸಿ ರಾಜ್ಯದ ವಿಚಾರಕ್ಕೆ ಭೇಟಿ ನೀಡುವ ಅಧಿಕಾರವಿಲ್ಲ. ಕೇವಲ ರಾಜಕೀಯ ಉದ್ದೇಶದಿಂದ ಭೇಟಿ ನೀಡುತ್ತಿದ್ದಾರೆ. ಈ ಸಮಿತಿಗೆ ಅಧಿಕೃತ ಮಾನ್ಯತೆ ಇಲ್ಲ ಎಂದು ತಿಳಿಸಿದರು.


Spread the love

About Laxminews 24x7

Check Also

ಕರ್ನಾಟಕ ಹವಾಮಾನ ವರದಿ: ರಾಜ್ಯದ ಹಲವೆಡೆ ಇಂದು ಗುಡುಗು ಸಹಿತ ಲಘು ಮಳೆಯ ಸೂಚನೆ

Spread the loveಬೆಂಗಳೂರು: ರಾಜ್ಯದಲ್ಲಿ ಹಲವು ದಿನಗಳಿಂದ ಶುಷ್ಕ ವಾತಾವರಣವೇ ಆವರಿಸಿದ್ದು, ಇನ್ನು ಕೆಲ ದಿನಗಳಲ್ಲಿ ಬೆಂಗಳೂರು ಬಿಸಿಲಿನ ಬೇಗೆಯಿಂದ ತತ್ತರಿಸಲಿದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ