Breaking News

ಬಡಜನರ ಕಣ್ಣೀರು ಒರೆಸುವ ಪಕ್ಷ ಕಾಂಗ್ರೆಸ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Spread the love

ಶಿಗ್ಗಾವಿ (ಹನುಮರಹಳ್ಳಿ): ಕಳೆದ ಚುನಾವಣೆಯಲ್ಲಿ ಸೋತರೂ ಜನರೊಂದಿಗೆ ಉತ್ತಮ ಒಡನಾಟ ಇಟ್ಟುಕೊಂಡು, ಕ್ಷೇತ್ರದ ಅಭಿವೃದ್ಧಿಗೆ ಹಗಲಿರುಳು ಶ್ರಮಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಖಾನ್ ಪಠಾಣ್ ಅವರನ್ನು ಬೆಂಬಲಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಮನವಿ ಮಾಡಿದ್ದಾರೆ.

ಶಿಗ್ಗಾವಿ-ಸವಣೂರು ವಿಧಾನ ಸಭಾ ಕ್ಷೇತ್ರದ ಕುಂದೂರು ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಹನುಮರಹಳ್ಳಿ, ಕಂಕನವಾಡ, ಚಿಕ್ಕ ನೆಲ್ಲೂರು ಹಾಗೂ ಕುಂದೂರು ಗ್ರಾಮಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಖಾನ್ ಪಠಾಣ್ ಪರ ಸಚಿವರು ಮತಯಾಚಿಸಿದರು.

ಕ್ಷೇತ್ರದಲ್ಲಿ ಬದಲಾವಣೆ ಗಾಳಿ ಬೀಸುತ್ತಿದ್ದು, ನಾವು ಎದುರಾಳಿ ಅಭ್ಯರ್ಥಿ ವಿರುದ್ಧ ಟೀಕೆ ಮಾಡುವುದಿಲ್ಲ. ‌ಕಾಂಗ್ರೆಸ್ ಸರ್ಕಾರದ ಸಾಧನೆಗಳನ್ನು ಜನರಿಗೆ ಮುಟ್ಟಿಸುವ ಕೆಲಸ ಮಾಡೋಣ. ಈ ಮೂಲಕ ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗೆ ಶ್ರಮಿಸೋಣ ಎಂದರು‌.

ಬಿಜೆಪಿ ಶ್ರೀಮಂತರ ಪಕ್ಷ ಆಗಿದೆ. ಶ್ರೀಮಂತರು ಬರೀ‌ ಶ್ರೀಮಂತರಾಗಿ, ಬಡವರನ್ನು ಬಡವರನ್ನಾಗಿಯೇ ಮಾಡುವುದು ಬಿಜೆಪಿಯ ಸಿದ್ಧಾಂತ ಆಗಿದೆ. ದೇಶದ ಉತ್ತಮ ಭವಿಷ್ಯಕ್ಕೆ ಕಾಂಗ್ರೆಸ್ ಪಕ್ಷ ಬೇಕು.‌ ಪ್ರಚಾರ ಪ್ರಿಯ ಬಿಜೆಪಿ ಪಕ್ಷ ಕ್ಷೇತ್ರಕ್ಕೆ ಬೇಡ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಉಳುವವನೆ ಭೂಮಿಯ ಒಡೆಯ ಕಾಯ್ದೆಯನ್ನು ಜಾರಿಗೆ ತಂದಿದ್ದು, ಅಂಗನವಾಡಿ ಕೇಂದ್ರಗಳನ್ನು ಆರಂಭಿಸಿದ್ದು, ಆರ್ ಟಿಇ, ಆಹಾರ ಕಾಯ್ದೆ, ಆರ್ ಟಿಐ ಹೀಗೆ ಹತ್ತು ಹಲವು ಜನಪರ ಯೋಜನೆಗಳನ್ನು ಜಾರಿಗೆ ತಂದ ಕೀರ್ತಿ ಕಾಂಗ್ರೆಸ್ ಪಕ್ಷಕ್ಕಿದೆ. 70‌ ವರ್ಷಗಳ ಹಿಂದೆ ಭಾರತ ಒಂದು ಬಡ ರಾಷ್ಟ್ರವಾಗಿತ್ತು. ಅಂದು ಬ್ರಿಟಿಷರ ದಬ್ಬಾಳಿಕೆ‌ ವಿರುದ್ಧ ಹೋರಾಡಿದ ಪಕ್ಷ ಕಾಂಗ್ರೆಸ್ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

 


Spread the love

About Laxminews 24x7

Check Also

ಫಿನಾಯಿಲ್ ಮಾರಾಟ ಮಾಡುತ್ತ ಚಿನ್ನದಂಗಡಿ ದೋಚಿದ್ದ ರಾಜಸ್ಥಾನಿ ಗ್ಯಾಂಗ್

Spread the loveಬೆಂಗಳೂರು : ಫಿನಾಯಿಲ್ ಸರಬರಾಜು ಮಾಡುತ್ತ ಚಿನ್ನದಂಗಡಿ ದೋಚಿದ್ದ ಐವರು ಆರೋಪಿಗಳನ್ನ ಕೆ. ಆರ್. ಪುರಂ ಠಾಣೆ ಪೊಲೀಸರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ