Breaking News

ವ್ಯಾನ್‌ನಲ್ಲಿ ಸಾಗಿಸುತ್ತಿದ್ದ ₹3.70 ಕೋಟಿ ನಗದು ವಶ

Spread the love

ಮುಂಬೈ: ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ವ್ಯಾನ್‌ನಲ್ಲಿ ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ ₹3.70 ಕೋಟಿಗೂ ಹೆಚ್ಚು ನಗದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.

‘ಖಚಿತ ಮಾಹಿತಿ ಮೇರೆಗೆ ಚುನಾವಣಾಧಿಕಾರಿಗಳು ಹಾಗೂ ಪೊಲೀಸರು ಶುಕ್ರವಾರ ರಾತ್ರಿ ಕಾರ್ಯಾಚರಣೆಯನ್ನು ನಡೆಸಿದ್ದು, ಪಾಲ್ಘರ್ ಜಿಲ್ಲೆಯ ವಾಡಾದಲ್ಲಿ ನಗದನ್ನು ವಶಪಡಿಸಿಕೊಳ್ಳಲಾಗಿದೆ’ ಎಂದು ಇನ್‌ಸ್ಪೆಕ್ಟರ್‌ ದತ್ತ ಕಿಂದ್ರೆ ತಿಳಿಸಿದ್ದಾರೆ.

Maharashtra Elections | ವ್ಯಾನ್‌ನಲ್ಲಿ ಸಾಗಿಸುತ್ತಿದ್ದ ₹3.70 ಕೋಟಿ ನಗದು ವಶ

‘ಶೋಧ ವೇಳೆಯಲ್ಲಿ ₹3.70 ಕೋಟಿ ನಗದು ವಶಪಡಿಸಿಕೊಳ್ಳಲಾಗಿದೆ. ಬಂಧಿತ ವ್ಯಕ್ತಿಗಳು ಈ ನಗದಿಗೆ ಸಂಬಂಧಿಸಿದಂತೆ ಯಾವುದೇ ದಾಖಲೆ ಹಾಜರುಪಡಿಸಿಲ್ಲ. ನವಿ ಮುಂಬೈ ಮೂಲದ ಕಂಪನಿಯಿಂದ ಪಾಲ್ಘರ್‌ನ ವಿಕ್ರಮಗಡಕ್ಕೆ ಹಣವನ್ನು ತೆಗೆದುಕೊಂಡು ಹೋಗಲಾಗುತ್ತಿತ್ತು ಎಂದು ಚಾಲಕ ತಿಳಿಸಿರುವುದಾಗಿ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಪ್ತಿ ಮಾಡಿದ ನಗದನ್ನು ಹೆಚ್ಚಿನ ತನಿಖೆಗೆ ಆದಾಯ ತೆರಿಗೆ ಇಲಾಖೆಗೆ ಹಸ್ತಾಂತರಿಸಲಾಗಿದೆ ಎಂದಿದ್ದಾರೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ