Breaking News

ಸಲ್ಮಾನ್ ಖಾನ್ ಚಿತ್ರದ ಚಿತ್ರೀಕರಣ ಸ್ಥಳದಲ್ಲಿ ವ್ಯಾಪಕ ಕಟ್ಟೆಚ್ಚರ

Spread the love

ಹೈದರಾಬಾದ್ : ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ (Salman Khan) ಅಭಿನಯದ ‘ಸಿಕಂದರ್’ ಚಿತ್ರದ ಶೂಟಿಂಗ್ ಹೈದರಾಬಾದ್‌ನ ಸ್ಟಾರ್ ಹೋಟೆಲ್‌ನಲ್ಲಿ ನಡೆಯುತ್ತಿದ್ದು, ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನಿಂದ ಟಾಪ್ ಹೀರೋಗೆ ಬಂದಿರುವ ನಿರಂತರ ಬೆದರಿಕೆಗಳ ಹಿನ್ನೆಲೆಯಲ್ಲಿ ಬಿಗಿ ಭದ್ರತೆಯ ನಡುವೆ ನಡೆಸಲಾಗುತ್ತಿದೆ.

 

ಸಲ್ಮಾನ್ ಖಾನ್ ಅವರು ‘ವೈ ಪ್ಲಸ್’ ವರ್ಗದ ಭದ್ರತೆ ಹೊಂದಿರುವುದರಿಂದ ಭದ್ರತೆಯನ್ನು ಬಿಗಿಗೊಳಿಸಲಾಗಿದೆ ಎಂದು ಪೊಲೀಸ್ ಮೂಲಗಳು ಶನಿವಾರ(ನ9) ತಿಳಿಸಿದ್ದು, ಹೆಚ್ಚಿನ ವಿವರಗಳನ್ನು ಹಂಚಿಕೊಳ್ಳಲು ನಿರಾಕರಿಸಿವೆ.’ಸಿಕಂದರ್’ ಚಿತ್ರದಲ್ಲಿ ‘ರಶ್ಮಿಕಾ ಮಂದಣ್ಣ ಕೂಡ ನಟಿಸುತ್ತಿದ್ದಾರೆ.

ವರದಿಗಳ ಪ್ರಕಾರ, ಸಲ್ಮಾನ್ ಖಾನ್ ಅವರಿಗೆ ಸರಕಾರದ ಭದ್ರತೆ ಜತೆಗೆ ತಮ್ಮದೇ ಆದ ಭದ್ರತೆಯನ್ನೂ ಹೊಂದಿದ್ದಾರೆ. ಈ ಹಿಂದೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನಿಂದ ಕೊಲೆ ಬೆದರಿಕೆಗಳನ್ನು ಪಡೆದಿದ್ದ ಸಲ್ಮಾನ್ ಅವರಿಗೆ ಮತ್ತೆ ಬೆದರಿಕೆಗಳನ್ನು ಹಾಕಲಾಗಿದೆ ಎಂದು ಅಧಿಕಾರಿಗಳು ಶುಕ್ರವಾರ ಮುಂಬೈನಲ್ಲಿ ತಿಳಿಸಿದ್ದರು.

ಗುರುವಾರ ರಾತ್ರಿ ಮುಂಬೈ ಸಂಚಾರ ಪೊಲೀಸರ ವಾಟ್ಸಾಪ್ ಸಹಾಯವಾಣಿಗೆ ಬೆದರಿಕೆ ಸಂದೇಶ ಕಳುಹಿಸಿ
5 ಕೋಟಿ ರೂ.ಗೆ ಬೇಡಿಕೆ ಇಟ್ಟಿದ್ದು, ಇದನ್ನು ಬಿಷ್ಣೋಯ್ ಗ್ಯಾಂಗ್ ಪರವಾಗಿ ಮಾಡಲಾಗುತ್ತಿದೆ ಎಂದು ಹೇಳಿಕೊಂಡಿದ್ದಾರೆ. ಇದಲ್ಲದೆ, ‘ಮೈ ಸಿಕಂದರ್ ಹೂ’ ಹಾಡಿನ ಗೀತರಚನೆಕಾರನಿಗೆ ಬೆದರಿಕೆ ಹಾಕಿದ್ದಾನೆ


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ