ರಾಮನಗರ: ರಾಜ್ಯ ಸರಕಾರ ದಿವಾಳಿಯಾಗಿದ್ದು ಉಪ ಚುನಾವಣೆ ಮುಗಿದ ಬಳಿಕ ಗೃಹಲಕ್ಷ್ಮಿ ಗ್ಯಾರಂಟಿಯನ್ನು ಸ್ಥಗಿತಗೊಳಿಸುತ್ತಾರೆ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹೇಳಿದರು.
ಚನ್ನಪಟ್ಟಣದಲ್ಲಿ 5ನೇ ದಿನ ತಮ್ಮ ಮೊಮ್ಮಗ ನಿಖೀಲ್ ಪರವಾಗಿ ಚುನಾವಣ ಪ್ರಚಾರ ನಡೆಸಿ, 5 ಗ್ಯಾರಂಟಿಗಳಲ್ಲಿ ಒಂದು ಗ್ಯಾರಂಟಿ ಕಸಿದು ಕೊಳ್ಳಲಿದ್ದು ಇದೀಗ ಉಪಚುನಾವಣೆ ಎಂಬ ಕಾರಣಕ್ಕೆ ಚನ್ನಪಟ್ಟಣ ಕ್ಷೇತ್ರದ ಮಹಿಳೆ ಯರ ಬ್ಯಾಂಕ್ ಖಾತೆಗಳಿಗೆ ಮಾತ್ರ ಹಣ ಜಮೆ ಮಾಡಿ ದ್ದಾರೆ.
ರಾಜ್ಯ ಸರಕಾರ ದಿವಾಳಿ ಯಾಗಿದೆ. ಚುನಾವಣೆ ಮುಗಿದ ಮೇಲೆ ಹಣ ಜಮಾ ಮಾಡುವುದನ್ನು ಮತ್ತೆ ನಿಲ್ಲಿಸುತ್ತಾರೆ. ಐದು ಗ್ಯಾರಂಟಿಗಳಲ್ಲಿ ಒಂದು ಗ್ಯಾರಂಟಿ ಕಸಿದುಕೊಂಡು ಹೋಗಿ ದ್ದಾರೆ. ಬೆಂಗಳೂರಿನಲ್ಲಿ ರಸ್ತೆ ಗುಂಡಿ ಮುಚ್ಚುವುದಕ್ಕೂ ಕಾಸಿಲ್ಲ, ಜನ ಉಗಿಯುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕಾಂಗ್ರೆಸ್ ಸರಕಾರ ಅಪರಿಮಿತವಾಗಿ ಚುನಾವಣ ಅಕ್ರಮಗಳನ್ನು ಎಸಗುತ್ತಿದೆ. ಅದಕ್ಕೆ ಗ್ಯಾರಂಟಿ ಯೋಜನೆಗಳನ್ನು ಕೂಡ ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿದರು. ಇಗ್ಗಲೂರು ಅಣೆಕಟ್ಟೆ ಕಟ್ಟಿದ ಒಬ್ಬ ರೈತನ ಮಗ ಈ ದೇವೇಗೌಡ ಇನ್ನೂ ಬದುಕಿದ್ದಾನೆ. ಅಣೆಕಟ್ಟೆ ಕಟ್ಟಲಿಲ್ಲ ಎಂದರೆ ಕೆರೆ ಗಳಿಗೆ ನೀರು ಹರಿಸಲು ಆಗುತ್ತಿತ್ತಾ ಎಂದು ಪ್ರಶ್ನಿಸಿದರು.
Laxmi News 24×7