ಬೆಂಗಳೂರು: ಚನ್ನಪಟ್ಟಣ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಪರ ಪ್ರಚಾರದ ವೇಳೆ ವಸತಿ ಹಾಗೂ ವಕ್ಫ್ ಸಚಿವ ಬಿ. ಝಡ್. ಜಮೀರ್ ಅಹ್ಮದ್ ಖಾನ್ ಭಾಷಣದ ಮಧ್ಯೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಅವಹೇಳನಕಾರಿ ಹೇಳಿಕೆಗೆ ಹಲವೆಡೆಯಿಂದ ಟೀಕೆಗಳು ವ್ಯಕ್ತವಾಗುತ್ತಿದ್ದಂತೆ ಸಮರ್ಥನೆ ನೀಡಿದ್ದಾರೆ.
ಈ ಹೇಳಿಕೆಯ ಬಗ್ಗೆ ಪ್ರತಿಕ್ರಿಯೆ ನೀಡಿ “ಕುಮಾರಸ್ವಾಮಿಯವರನ್ನು ನಾನು ಪ್ರೀತಿಯಿಂದ ಕರಿಯಣ್ಣ ಅಂತಾನೇ ಕರೆಯೋದು. ಅವರು ನನ್ನನ್ನು ಕುಳ್ಳ ಅಂತಿದ್ರು” ಎಂದು ಜಮೀರ್ ಅಹ್ಮದ್ ಖಾನ್ ತಮ್ಮ ಹೇಳಿಕೆಯ ಸಮರ್ಥಿಸಿಕೊಂಡಿದ್ದಾರೆ.
“ಕುಮಾರಸ್ವಾಮಿಯವರು ನನ್ನನ್ನು ಕುಳ್ಳ ಅಂತಾರೆ, ನಾನು ಪ್ರೀತಿಯಿಂದ ಅವರನ್ನು ಕರಿಯಣ್ಣ ಅಂತಾನೇ ಕರೆಯುತ್ತಿದ್ದೆ”. ಕುಳ್ಳಗಿರುವ ನನ್ನನ್ನು ಅವರು ಯಾವಾಗಲೂ ಕುಳ್ಳ ಅಂತ ಕರೆಯುತ್ತಾರೆ. ಭಾಷಣ ಮಾಡುವಾಗ ಅವರನ್ನು ಕರಿಯಣ್ಣ ಎಂದಿದ್ದೇನೆಯೇ ಹೊರತು ಬಣ್ಣದ ಆಧಾರದ ಮೇಲೆ ಜನಾಂಗೀಯ ನಿಂದನೆ ಮಾಡಿಲ್ಲ ಎಂದು ಜಮೀರ್ ಸ್ಪಷ್ಟನೆ ನೀಡಿದ್ದಾರೆ. ನನಗೆ ರಾಜಕೀಯ ಗುರು ಅಂದ್ರೆ ದೇವೇಗೌಡರು. ಆದರೆ 93ನೇ ವಯಸ್ಸಿನಲ್ಲೂ ಕುಮಾರಸ್ವಾಮಿಯವರು, ದೇವೇಗೌಡರರಿಂದ ಪ್ರಚಾರ ಮಾಡಿಸುತ್ತಿದ್ದಾರೆ. ಇದು ನನಗೆ ನೋವು ತಂದಿದೆ ಅಂತ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ.
Laxmi News 24×7