ಬೈಲಹೊಂಗಲ: ‘ಸಮಾಜ ತಿದ್ದುವಲ್ಲಿ ಮಠಗಳು ಅವಿರತವಾಗಿ ಪ್ರಯತ್ನಿಸುತ್ತಿದ್ದು, ಇಂಥಹ ಪವಿತ್ರ ಕ್ಷೇತ್ರಗಳಲ್ಲಿ ರಾಜಕೀಯ ಬೆರಸದೇ, ಭಕ್ತರಾಗಿ ಬಂದು ಇವುಗಳ ಉದ್ಧಾರಕ್ಕಾಗಿ ಪ್ರತಿಯೊಬ್ಬರೂ ಶ್ರಮಿಸಬೇಕು’ ಎಂದು ಧಾರವಾಡ ಮುರುಘಾಮಠದ ಮಲ್ಲಿಕಾರ್ಜುನ ಸ್ವಾಮೀಜಿ ಹೇಳಿದರು.
ತಾಲ್ಲೂಕಿನ ಬೈಲವಾಡ ಗ್ರಾಮದ ವರ್ತಿ ಸಿದ್ಧಬಸವೇಶ್ವರ ದೇವಸ್ಥಾನ ಆವರಣದಲ್ಲಿ ನಿರ್ಮಿಸಿದ ಕಲ್ಯಾಣ ಮಂಟಪ ಉದ್ಘಾಟನೆ ಹಾಗೂ ಗುರುಭವನ ಭೂಮಿಪೂಜೆ ಸಮಾರಂಭದಲ್ಲಿ ಮಾತನಾಡಿದ ಅವರು, ‘ಜಿಲ್ಲೆಯು ಐತಿಹಾಸಿಕ, ಧಾರ್ಮಿಕ ಕ್ಷೇತ್ರ ಸೇರಿದಂತೆ ಹಲವಾರು ರಂಗದಲ್ಲಿ ಮುಂಚೂಣಿಯಲ್ಲಿದೆ. ಸಾಧಕರು ತಮ್ಮ ಕಾರ್ಯಕ್ಷೇತ್ರದಿಂದ ಜಗಕ್ಕೆ ಬೆಳಕಾಗಿ ಹೋಗಿದ್ದಾರೆ. ಅಂಥವರ ಸಾಲಿನಲ್ಲಿ ವರ್ತಿ ಸಿದ್ಧಬಸವೇಶ್ವರರು ಪ್ರಮುಖರು’ ಎಂದರು.
ಶಾಸಕ ಮಹಾಂತೇಶ ಕೌಜಲಗಿ ಮಾತನಾಡಿ, ‘ಕ್ಷೇತ್ರದಲ್ಲಿ ಕಲ್ಯಾಣ ಮಂಟಪ ನಿರ್ಮಿಸಿದ್ದು ಹೆಮ್ಮೆ. ಮುಂದಿನ ದಿನಗಳಲ್ಲಿ ಸಾಮಾಜಿಕ ಕಾರ್ಯಗಳಿಗೂ ಈ ಮಂಟಪ ವಿನಿಯೋಗವಾಗಲಿ. ಕ್ಷೇತ್ರದ ಅಭಿವೃದ್ದಿಗೆ ಸದಾ ಬದ್ಧನಾಗಿದ್ದೇನೆ’ ಎಂದು ತಿಳಿಸಿದರು.
ಮಾಜಿ ಶಾಸಕರಾದ ವಿಶ್ವನಾಥ ಪಾಟೀಲ, ಜಗದೀಶ ಮೆಟಗುಡ್ಡ, ಮಹಾಂತೇಶ ದೊಡ್ಡಗೌಡರ, ಕೆಪಿಸಿಸಿ ಸದಸ್ಯ ರೋಹಿಣಿ ಪಾಟೀಲ, ಜೆಡಿಎಸ್ ಮುಖಂಡ ಶಂಕರ ಮಾಡಲಗಿ, ಧಾರ್ಮಿಕ ದತ್ತಿ ಇಲಾಖೆಯ ಮುಜುರಾಯಿ ರಾಜ್ಯ ನಿರ್ದೇಶಕ ಮಹಾಂತಯ್ಯ ಶಾಸ್ತ್ರೀ ಆರಾದ್ರಿಮಠ ಮಾತನಾಡಿದರು.
Laxmi News 24×7