Breaking News

ಬೆಂಬಿಡದ ಬಿಡಾಡಿ ದನಗಳ ಹಾವಳಿ

Spread the love

ಚಿಕ್ಕೋಡಿ: ಪಟ್ಟಣದ ಬಹುತೇಕ ರಸ್ತೆ, ಗಲ್ಲಿ, ಹೆದ್ದಾರಿ, ಮಾರುಕಟ್ಟೆಗಳಲ್ಲಿ ಬಿಡಾಡಿ ದನಗಳ ಹಾವಳಿ ವಿಪರೀತವಾಗಿದೆ. ಸಂಕೇಶ್ವರ- ಜೇವರ್ಗಿ, ನಿಪ್ಪಾಣಿ- ಮುಧೋಳ ಎರಡು ರಾಜ್ಯ ಹೆದ್ದಾರಿಗಳು ಪಟ್ಟಣದಲ್ಲಿ ಹಾದು ಹೋಗುವುದರಿಂದ ವಾಹನ ದಟ್ಟನೆ ಹೆಚ್ಚಾಗಿದೆ. ನಿತ್ಯ ಓಡಾಡುವ ವಾಹನ ಸವಾರರು ಬಿಡಾಡಿ ದನಗಳ ಹಾವಳಿಯಿಂದ ತೊಂದರೆ ಅನುಭವಿಸುತ್ತಿದ್ದಾರೆ.

 

ಶೈಕ್ಷಣಿಕ ಜಿಲ್ಲಾ ಕೇಂದ್ರವೂ, ಉಪ ವಿಭಾಗ ಕೇಂದ್ರವನ್ನು ಹೊಂದಿರುವ ಚಿಕ್ಕೋಡಿ ಪಟ್ಟಣಕ್ಕೆ ಪ್ರತಿದಿನ ಸಹಸ್ರಾರು ಜನರು ತಮ್ಮ ಕೆಲಸಕ್ಕೆ ಆಗಮಿಸುತ್ತಾರೆ. ಹಗಲಿರುಳು 50- 60 ಬಿಡಾಡಿ ದನಗಳು ರಸ್ತೆ ಮೇಲೆಯೇ ಠಿಕಾಣಿ ಹೂಡುವುದರಿಂದ ಅನೇಕ ಬಾರಿ ಅಪಘಾತಗಳು ಸಂಭವಿಸಿ, ಬೈಕ್ ಸವಾರರು ಗಾಯಗೊಂಡ ಉದಾಹರಣೆಗಳು ಇವೆ. ಈ ಕುರಿತು ಎಚ್ಚರಿಕೆ ವಹಿಸಬೇಕಿದ್ದ ಪುರಸಭೆ ಹಾಗೂ ಪೊಲೀಸ್ ಅಧಿಕಾರಿಗಳು ಜಾಣ ನಿದ್ರೆಗೆ ಜಾರಿದ್ದಾರೆ.

ಕೇಂದ್ರ ಬಸ್ ನಿಲ್ದಾಣ, ಸರ್ಕಾರಿ ಆಸ್ಪತ್ರೆ ಮುಂಬಾಗ, ಬಸವೇಶ್ವರ ವೃತ್ತ, ಇಂದಿರಾನಗರ ಕ್ರಾಸ್, ಗಾಂಧಿ ಮಾರುಕಟ್ಟೆ, ಕೆ.ಸಿ. ಮಾರುಕಟ್ಟೆ, ಗಣಪತಿ ಪೇಟೆ ಮುಂತಾದ ಕಡೆಗೆ ನೂರಾರು ದನಗಳು ಎಲ್ಲೆಂದರಲ್ಲಿ ಓಡಾಡುತ್ತಿವೆ. ದನಗಳ ಹಾವಳಿಯಿಂದ ಬೀದಿ ಬದಿಯ ವ್ಯಾಪಾರಿಗಳು ಹೈರಾಣಾಗಿದ್ದಾರೆ. ಮಾರಾಟಕ್ಕಿಟ್ಟ ಹಣ್ಣು ತರಕಾರಿಗಳನ್ನು ತಿನ್ನಲು ಬಾಯಿ ಹಾಕುವುದರಿಂದ ದನಗಳನ್ನು ಓಡಿಸಿ ಕಳುಹಿಸುವುದು ವ್ಯಾಪಾರಸ್ಥರಿಗೆ ತಲೆನೋವಾಗಿದೆ.

‘ಪುರಸಭೆಯ ಈ ಹಿಂದಿಯ ಮುಖ್ಯಾಧಿಕಾರಿ ಸಾರ್ವಜನಿಕರ ಸಮಸ್ಯೆಗೆ ಸ್ಪಂಧಿಸುತ್ತಿದ್ದರು. ದನಗಳ ಮಾಲೀಕರಿಗೆ ನೋಟಿಸ್ ನೀಡಿ ಒಂದಿಷ್ಟು ನಿಯಂತ್ರಣ ಮಾಡಿದ್ದರು. ಈಗಿನವರು ಸಮಸ್ಯೆ ಆಲಿಸುತ್ತಿಲ್ಲ’ ಎಂದು ಜನ ದೂರುತ್ತಿದ್ದಾರೆ.


Spread the love

About Laxminews 24x7

Check Also

ನಾಯಕತ್ವ ಬದಲಾವಣೆ ವಿಚಾರವಾಗಿ ರಾಹುಲ್​ ಗಾಂಧಿ​ ತೀರ್ಮಾನಕ್ಕೆ ನಾನು ಬದ್ಧ: ಸಿಎಂ

Spread the loveಮೈಸೂರು: “ನಾಯಕತ್ವ ಬದಲಾವಣೆ ವಿಚಾರವಾಗಿ ರಾಹುಲ್​ ಗಾಂಧಿ ಮತ್ತು ಹೈಕಮಾಂಡ್​ ತೀರ್ಮಾನ ಮಾಡಬೇಕು. ಅವರು ಏನು ತೀರ್ಮಾನ ಮಾಡುತ್ತಾರೋ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ