Breaking News

ಮೀಸಲಾತಿ ಸಿಗದಿದ್ದರೆ ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ: ಬಸನಗೌಡ ಪಾಟೀಲ ಯತ್ನಾಳ

Spread the love

ಮುಗಳಖೋಡ: ‘ಪಂಚಮಸಾಲಿ ಸಮುದಾಯಕ್ಕೆ ಡಿ.9ರೊಳಗೆ ಪ್ರವರ್ಗ ‘2ಎ’ ಮಿಸಲಾತಿ ಸಿಗದಿದ್ದರೆ, ವಿಧಾನಮಂಡಲ ಚಳಿಗಾಲ ಅಧಿವೇಶನ ವೇಳೆ ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಗುವುದು’ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.

ಇಲ್ಲಿನ ಬಸವಶ್ರೀ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಬುಧವಾರ ನಡೆದ ರಾಯಬಾಗ ತಾಲ್ಲೂಕಿನ ಪಂಚಮಸಾಲಿ ಸಮುದಾಯದ ಸಭೆಯಲ್ಲಿ ಮಾತನಾಡಿದ ಅವರು, ‘ರೈತರು, ವಿದ್ಯಾರ್ಥಿಗಳು, ವಕೀಲರು ಸೇರಿದಂತೆ ಪಂಚಮಸಾಲಿ ಸಮುದಾಯದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಹೋರಾಟದಲ್ಲಿ ಭಾಗವಹಿಸಲು ಸಿದ್ದರಾಗಬೇಕು’ ಎಂದು ಕರೆ ನೀಡಿದರು.

 

ಬಸವಜಯ ಮೃತ್ಯುಂಜಯ ಸ್ವಾಮೀಜಿ, ‘ನಮ್ಮ ಸಮುದಾಯದ ಸಹಕಾರ ಇಲ್ಲದೆ, ರಾಜ್ಯ ಸರ್ಕಾರ ಅಧಿಕಾರ ನಡೆಸಲು ಸಾಧ್ಯವಿಲ್ಲ. ಆದರೂ, ನಮ್ಮನ್ನು ಕಡೆಗಣಿಸಲಾಗುತ್ತಿದೆ. ಹಾಗಾಗಿ ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಸಿದ್ಧರಾಗಿದ್ದೇವೆ’ ಎಂದರು.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ